8:23 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಂದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

04/09/2024, 21:45

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಅಲ್ಪಸಂಖ್ಯಾತ ವರ್ಗಗಳ ಕಲ್ಯಾಣಕ್ಕಾಗಿ ರೂಪಿಸಲಾಗಿರುವ ಪ್ರಧಾನ ಮಂತ್ರಿಗಳ 15 ಹೊಸ ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ವಿನಾ ಕಾರಣ ನೆಪವೊಡ್ಡದೆ ನಿಗದಿತ ಅವಧಿಯೊಳಗೆ ಗುರಿ ಸಾಧಿಸಬೇಕು.
ಅಲ್ಪಸಂಖ್ಯಾತರ ಸಮುದಾಯಕ್ಕೆ ಶಿಕ್ಷಣ, ಕೌಶಲ್ಯ ಹಾಗೂ ಇತರೆ ಉದ್ಯೋಗಗಳಿಗೆ ತರಬೇತಿ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದರು.
ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ವಿವಿಧ ಇಲಾಖೆಗಳು ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ನೀಡಬೇಕಾದರೆ ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸಬೇಕು. ಇದರಿಂದ ಹೆಚ್ಚಿನ ಇಲಾಖಾ ಯೋಜನೆಗಳು ಪ್ರಚಾರವಾಗಲಿವೆ. ಅದರಂತೆ ಉಸ್ತುವಾರಿ ಸಚಿವರ ಜನ ಸ್ಪಂದನ ಕಾರ್ಯಕ್ರಮದಲ್ಲಿ ಸಚಿವರ ಮೂಲಕ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಹೇಳಿದರು.
ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ವಿವಿಧ ಯೋಜನೆಗಳನ್ನು ಅರ್ಹರಿಗೆ ಸುಲಭ ರೀತಿಯಲ್ಲಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.
*ಗುರಿ ಸಾಧನೆಗೆ ಸೂಚನೆ:*
ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳು ಸಮರ್ಪಕ ಬಳಕೆ ಆಗಬೇಕು. ನಿಗದಿತ ಅವಧಿಯೊಳಗೆ ಗುರಿ ಸಾಧಿಸಬೇಕು ಎಂದು ಅವರು ಸೂಚಿಸಿದರು.
ಮೀನುಗಾರಿಕೆ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ಬಲೆ ಹಾಗೂ ಇತ್ಯಾದಿ ಅಗತ್ಯ ಉಪಕರಣಗಳನ್ನು ನೀಡಲಾಗಿದೆ ಅದರ ಮಾಹಿತಿ ಕೂಡ ಇಲಾಖಾ ವೆಬ್ ಸೈಟ್ ಗಳಲ್ಲಿ ಪ್ರಕಟಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸಲು, ಜಿಲ್ಲೆಯಲ್ಲಿ ಉದ್ಯೋಗ ಮೇಳಗಳನ್ನು ಆಯೋಜನೆ ಮಾಡಲಾಗುತ್ತಿದೆ. ಅಲ್ಪಸಂಖ್ಯಾತರ ಯುವಕ ಯುವತಿಯರಿಗೆ ಈಗಾಗಲೇ ಉದ್ಯೋಗ ದೊರೆತಿವೆ. ವೃತ್ತಿ ಮಾರ್ಗದರ್ಶನ ಯೋಜನೆಯಡಿ ಸ್ಥಳೀಯ ಕಾಲೇಜುಗಲ್ಲಿ ಇಲಾಖೆಯಿಂದ ತರಬೇತಿ ನೀಡಲಾಗುತ್ತಿದೆ ಎಂದು ಸಂಬಂಧಿಸಿದ ಅಧಿಕಾರಿಗಳು ವಿವರಿಸಿದರು.
ಕೋಲಾರದಲ್ಲಿ ಮಹಿಳಾ ಮತ್ತು ಪುರುಷರ ಐಟಿಐ ಕಾಲೇಜುಗಳಲ್ಲಿ ಮೀಸಲಾತಿ ಅನ್ವಯ ಈಗಾಗಲೇ ಪ್ರವೇಶ ನೀಡಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳಿಗೆ ಪ್ರವೇಶಾತಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಬಹಳಷ್ಟು ಅರ್ಜಿ ಬಂದಿವೆ. ಸ್ಥಳೀಯ ಶಾಸಕರಿಂದ ಮಾಹಿತಿ ನೀಡಿ, ಕೂಡಲೇ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.
*ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಹರಿಗೆ ಸಾಲ ಸೌಲಭ್ಯ ಒದಗಿಸಿ:*
ಡೇ-ನಲ್ಡ್ ಯೋಜನೆಯಡಿ ಅಲ್ಪಸಂಖ್ಯಾತರಿಗೆ ಈಗಾಗಲೇ ವಿವಿಧ ಸಾಲ ಸೌಲಭ್ಯ ಒದಗಿಸಲು ಬ್ಯಾಂಕ್ ಗಳಿಗೆ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಆಕ್ರಂ ಪಾಷ ಅವರು ಬ್ಯಾಂಕ್ ಗಳಿಗೆ ಖುದ್ದಾಗಿ ಸಂಪರ್ಕಿಸಿ ಅರ್ಜಿಗಳನ್ನು ಅಪೂವಲ್ ನೀಡಲು ಸೂಚಿಸಬೇಕು.
ಸ್ವ-ಸಹಾಯ ಗುಂಪಿನ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುವವರೆಗೂ ಅಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂದು ತಿಳಿಸಿದರು.
*ರೈತರಿಗೆ ಸಾಲ ಸೌಲಭ್ಯ:*
ಸಹಕಾರ ಇಲಾಖೆಯಿಂದ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರಿಗೆ ಈಗಾಗಲೇ ದೀರ್ಘಾವಧಿ ಸಾಲ ನೀಡಲಾಗಿದೆ. ನೀರಾವರಿ ಜಮೀನು ಹೊಂದಿದ ರೈತರಿಗೆ ಶೇಕಡಾ 3% ಬಡ್ಡಿ ದರದಲ್ಲಿ 15 ಲಕ್ಷದ ವರೆಗೆ ಸಾಲ ನೀಡಲಾಗುವದು ಎಂದು ಸಹಕಾರ ಇಲಾಖೆ ಅಧಿಕಾರಿಗಳು ಹೇಳಿದರು.


ಅದೇ ರೀತಿಯಲ್ಲಿ ಪಶುಪಾಲನಾ ಇಲಾಖೆಯಿಂದ ಮುಖ್ಯಮಂತ್ರಿ ಅಮೃತ್ ಜೀವನ ಯೋಜನೆಯಡಿ ಹೈನುಗಾರಿಕೆ ಘಟಕ ಸ್ಥಾಪಿಸಲು ಈಗಾಗಲೇ ಸಹಾಯಧನ, ಸಾಲ ಸೌಲಭ್ಯ ನೀಡಲಾಗಿದೆ ಎಂದು ಸಂಬಂಧಿಸಿದ ಅಧಿಕಾರಿಗಳು ವಿವರಿಸಿದರು.
ವಿವಿಧ ಬ್ಯಾಂಕ್ ಗಳ ಬಡ್ಡಿ ದರ ಹಾಗೂ ವಿವಿಧ ಯೋಜನೆಗಳ ಸಾಲ ಸೌಲಭ್ಯ ಮಾಹಿತಿ ಕುರಿತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯ ನೋಟಿಸ್ ಬೋರ್ಡ್ ನಲ್ಲಿ ಮಾಹಿತಿ ನಮೂದಿಸಬೇಕು ಇದರಿಂದ ಇಲಾಖೆಯ ಯೋಜನೆಗಳ ಸೌಲಭ್ಯ ಕೋರಿ ಬರುವ ಜನರಿಗೆ ಸಹಾಯ ಆಗಲಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ನಿರ್ದೇಶನ ನೀಡಿದರು.
ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಸುಮಯಾ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ. ನಿಖಿಲ್, ಉಪವಿಭಗಾಧಿಕಾರಿ ಡಾ. ಮೈತ್ರಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮುರಳಿ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಅಂಬಿಕಾ , ಕೃಷಿ ಜಂಟಿ ನಿರ್ದೇಶಕರು ಸುಮಾ, ಜಿಲ್ಲಾಕಾರ್ಮಿಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು