12:29 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಆಳ್ವಾಸ್ ರಂಗ ಅಧ್ಯಯನ ಕೇಂದ್ರದಿಂದ ಡಾ. ಹಂ.ಪ.ನಾಗರಾಜಯ್ಯ ಅವರ ‘ಚಾರುವಸಂತ’ ಪ್ರಸ್ತುತಿ

31/10/2023, 23:25

ಮೂಡುಬಿದಿರೆ(reporterarnataka.com): ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತದ ಕುಟುಂಬದ ಬಿಂಬ ‘ಚಾರು ವಸಂತ’ ಎಂದು ಹಿರಿಯ ಸಂಶೋಧಕ ಹಾಗೂ ಕೃತಿಕಾರ ಡಾ. ಹಂ.ಪ.ನಾಗರಾಜಯ್ಯ
(ಹಂಪನಾ)ಹೇಳಿದರು.

ಇಲ್ಲಿನ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ನಿರ್ದೇಶನದಲ್ಲಿ ಪ್ರಸ್ತುತ ಪಡಿಸಿದ ತಮ್ಮ (ಡಾ.ಹಂ.ಪ.ನಾಗರಾಜಯ್ಯ) ‘ಚಾರುವಸಂತ’ ನಾಟಕವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಇದು ನನ್ನ ಕನಸು ನನಸಾದ ದಿನ. ನಾನು ಯುವಕ ಅಲ್ಲ. ಆದರೆ, ‘ಬಯಸುತ್ತೇನೆ ನಿಮ್ಮ ಆಮ್ಲಜನಕ’ ಎಂದು ಭಾವುಕರಾದರು. ಭಾರತೀಯ ಮಾತ್ರವಲ್ಲ ಎಲ್ಲ ಕುಟುಂಬಗಳಲ್ಲೂ ಏಳುಗಾಲ ಹಾಗೂ ಬೀಳುಗಾಲ ಇರುತ್ತದೆ. ಏಳುಬೀಳುಗಳ ಜೀವನದ ಕಥನವೇ ‘ಚಾರುವಸಂತ’ ಎಂದರು.
ಎಲ್ಲ ಧರ್ಮ, ಮತವನ್ನು ಗೌರವಿಸಬೇಕು. ದ್ವೇಷ, ಅಸೂಯೆ, ಈರ್ಷೆ ಬಿಟ್ಟು ಬಿಡಬೇಕು. ಪರಿಸರ ಸಂರಕ್ಷಿಸಬೇಕು ಎಂಬ ಸಂದೇಶವಿದೆ ಎಂದರು. ಮೋಹನ ಆಳ್ವರ ಅಂತರಂಗಕ್ಕೆ ಬಿದ್ದ ಯಾವುದೇ ಕಲೆಯು ಕೃತಿಯಾಗುತ್ತದೆ ಎಂದು ಅವರು ಶ್ಲಾಘಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾತನಾಡಿ, ಕೃತಿಗಳು ಹೆಚ್ಚು ಮಾತನಾಡಬೇಕು. ವ್ಯಕ್ತಿಗಳಲ್ಲ ಎಂದರು. ಪರಿಸರ ರಕ್ಷಣೆಯ ಮಹತ್ವ ನಾಟಕದಲ್ಲಿದೆ. ಧರ್ಮ, ಜಾತಿ ಮುಖ್ಯವಲ್ಲ, ಸೌಹಾರ್ದತೆ ಮುಖ್ಯ. ಸುಖ- ದುಖ ಸಮಾನವಾಗಿ ಸ್ವೀಕರಿಸಿ ಎಂಬ ಸಂದೇಶ ನಾಟಕದಲ್ಲಿದೆ ಎಂದರು.
ಹಂಪನಾ ಅವರು ಆಳ್ವಾಸ್ ನುಡಿಸಿರಿಯ ಸರ್ವಾಧ್ಯಕ್ಷತೆ ವಹಿಸಿದ್ದರು. ಅವರ ಪತ್ನಿ ಕಮಲಾ ಹಂಪನಾ ಮೂಡುಬಿದಿರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ರಾಗಿದ್ದರು. ಅವರ ಕುಟುಂಬದ ಜೊತೆ ನಮಗೆಲ್ಲ ಅವಿನಾಭಾವ ನಂಟಿದ ಎಂದು ನೆನಪಿಸಿಕೊಂಡರು.
ನಾಟಕ ಎಂದರೆ ನಿರ್ದೇಶಕನ ಕೈಚಳಕ. ಜೀವನ್ ರಾಂ ಸುಳ್ಯ ಅವರು ನಾಟಕವನ್ನು ರಂಗ ರೂಪಕ್ಕೆ ತಂದ ಬೆರಗನ್ನು ನೋಡಿದರೆ ಹಂಪನಾ ಮೂಕವಿಸ್ಮಿತರಾಗುವರು ಎಂದು ಶ್ಲಾಘಿಸಿದರು.
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಂ ಸುಳ್ಯ ಮಾತನಾಡಿ, ೨೦೦೩ರಲ್ಲಿ ಹಂಪನಾ ಬರೆದ ಚಾರುವಸಂತವನ್ನು ಡಾ.ಎಂ.ಮೋಹನ ಆಳ್ವರ ಆಶಯದಂತೆ ನಿರ್ದೇಶಿಸಲಾಗಿದೆ. ರಂಗಕರ್ಮಿ ಡಾ. ನಾ.ದಾ. ಶೆಟ್ಟಿ ರಂಗರೂಪ ನೀಡಿದ್ದಾರೆ. ಸುಮಾರು ಎರಡು ವರ್ಷಗಳ ಈ ಪಯಣವು ಮೂಡುಬಿದಿರೆ ಮೂಲಕ ರಾಜ್ಯದಾದ್ಯಂತ ತಿರುಗಾಟ ನಡೆಸಲಿದೆ ಎಂದರು.
ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮಹಮ್ಮದ್ ಸದಾಕತ್ ಇದ್ದರು. ಉಪನ್ಯಾಸಕ ವೇಣುಗೋಪಾಲ ಕೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಎಲ್ಲೆಲ್ಲಿ?: ಚಾರುವಸಂತ ನಾಟಕವು
ನ.೦೨ ರಂದು ರವೀಂದ್ರ ಕಲಾಕ್ಷೇತ್ರ ಬೆಂಗಳೂರು, ನ.೦೪ ಡಾ.ಎಚ್.ಎನ್.ಕಲಾಮಂದಿರ ಗೌರಿಬಿದನೂರು, ನ.೦೬ ಗುಬ್ಬಿ ವೀರಣ್ಣ ಕಲಾಮಂದಿರ ತುಮಕೂರು, ನ.೦೮ ರಂದು ತ.ರಾ.ಸು. ರಂಗಮAದಿರ ಚಿತ್ರದುರ್ಗ, ನ.೧೦ ರಂದು ಮಲ್ಲಿಕಾರ್ಜುನ ರಂಗಮAದಿರ ದಾವಣಗೆರೆ, ನ.೧೨ ಡಾ.ಪಾಟೀಲ ಪುಟ್ಟಪ್ಪ ಸಭಾಭವನ ಧಾರವಾಡ ಹಾಗೂ ನ.೧೫ ರಂದು ರಂಗಮನೆ ಸುಳ್ಯದಲ್ಲಿ ಪ್ರದರ್ಶನಗೊಳ್ಳಲಿದೆ

ಇತ್ತೀಚಿನ ಸುದ್ದಿ

ಜಾಹೀರಾತು