ಇತ್ತೀಚಿನ ಸುದ್ದಿ
ಅಂಬೇಡ್ಕರ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನ: ಸದನದಲ್ಲಿ ಆಡಳಿತ ಪಕ್ಷ ಪ್ರತಿಭಟನೆ; ಪ್ರತಿಪಕ್ಷ ಸಭಾತ್ಯಾಗ
19/12/2024, 13:15
ಬೆಳಗಾವಿ ಸುವರ್ಣ
ವಿಧಾನಸೌಧ(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಮಿತ್ ಶಾ ಅವರನ್ನು ಸಮರ್ಥಿಸಿ ಸದನದಿಂದ ಹೊರ ನಡೆದರು.
ಬಳಿಕ ಆಡಳಿತ ಪಕ್ಷದ ಸದಸ್ಯರು ತಮ್ಮ ಆಸನಗಳ ಎದುರು ಅಂಬೇಡ್ಕರ್ ಅವರ ಭಾವಚಿತ್ರವನ್ನು ಜೋಡಿಸಿಟ್ಟರು.
ಆ ವೇಳೆ ಸದನ ಅಂಬೇಡ್ಕರ್ ಪ್ರಭೆಯಿಂದ ಕಂಗೊಳಿಸಿದ ದೃಶ್ಯ.