10:05 PM Friday9 - January 2026
ಬ್ರೇಕಿಂಗ್ ನ್ಯೂಸ್
ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು

ಇತ್ತೀಚಿನ ಸುದ್ದಿ

ಅಂಬಾತನಯ ಮುದ್ರಾಡಿ, ಬಲಿಪ ನಾರಾಯಣ ಭಾಗವತ ಸಹಿತ ಅಗಲಿದ ಹಿರಿಯ ಸಾಧಕರಿಗೆ ಜಿಲ್ಲಾ ಸಾಹಿತ್ಯ ಪರಿಷತ್ತಿನಿಂದ ನುಡಿನಮನ

22/02/2023, 11:21

ಮಂಗಳೂರು (reporterKarnataka.com) ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ಭಾಗವತರಾದ ಬಲಿಪ ನಾರಾಯಣ ಭಾಗವತ, ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ವಿಜಯರಾಘವ ಪಡ್ವೆಟ್ನಾಯರು, ಸಿನಿಮಾ ನಿರ್ದೇಶಕ ಕೆ.ಎಸ್.ಭಗವಾನ್ ಹಾಗೂ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಅವರಿಗೆ ನುಡಿನಮನ ಕಾರ್ಯಕ್ರಮ ನಂತೂರು ಪದವು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಮಂಗಳವಾರ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಗೌರವ ಕಾರ್ಯದರ್ಶಿ ವಿನಯ ಆಚಾರ್ಯ, ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಸಾಹಿತಿಗಳಾದ ರವಿ ಅಲೆಯೂರು, ಗಣೇಶ್ ಪ್ರಸಾದ ಪಾಂಡೇಲು, ಸುಬ್ರಾಯ ಭಟ್, ಸುರೇಶ ನೆಗಳಗುಳಿ, ಬಣ್ಣದ ಮಹಾಲಿಂಗ ಯಕ್ಷ ಪ್ರತಿಷ್ಠಾನದ ಗೌರವಾಧ್ಯಕ್ಷ ಕೆ.ಮಹಾಲಿಂಗ ಪಾಟಾಳಿ, ಭಾರತಿ ಪಿಯು ಶಾಲೆ ಪ್ರಿನ್ಸಿಪಾಲ್ ಗಂಗಾರತ್ನ, ಪದವಿ ಪ್ರಿನ್ಸಿಪಾಲ್ ಪ್ರೊ.ಜೀವನ್‌ದಾಸ್, ಅರುಣ ಕುಮಾರಿ, ಕಾಲೇಜ್ ಶಿಕ್ಷಕಿ ನಿಖಿತಾ, ದಯಾನಂದ ರಾವ್ ಕಾವೂರು ಮೊದಲಾದವರು ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅಗಲಿದ ಹಿರಿಯ ಸಾಧಕರ ಭಾವಚಿತ್ರಗಳಿಗೆ ಪುಷ್ಪನಮನವನ್ನು ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು