11:33 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಅಂಬಾತನಯ ಮುದ್ರಾಡಿ, ಬಲಿಪ ನಾರಾಯಣ ಭಾಗವತ ಸಹಿತ ಅಗಲಿದ ಹಿರಿಯ ಸಾಧಕರಿಗೆ ಜಿಲ್ಲಾ ಸಾಹಿತ್ಯ ಪರಿಷತ್ತಿನಿಂದ ನುಡಿನಮನ

22/02/2023, 11:21

ಮಂಗಳೂರು (reporterKarnataka.com) ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ಭಾಗವತರಾದ ಬಲಿಪ ನಾರಾಯಣ ಭಾಗವತ, ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ವಿಜಯರಾಘವ ಪಡ್ವೆಟ್ನಾಯರು, ಸಿನಿಮಾ ನಿರ್ದೇಶಕ ಕೆ.ಎಸ್.ಭಗವಾನ್ ಹಾಗೂ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಅವರಿಗೆ ನುಡಿನಮನ ಕಾರ್ಯಕ್ರಮ ನಂತೂರು ಪದವು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಮಂಗಳವಾರ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಗೌರವ ಕಾರ್ಯದರ್ಶಿ ವಿನಯ ಆಚಾರ್ಯ, ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಸಾಹಿತಿಗಳಾದ ರವಿ ಅಲೆಯೂರು, ಗಣೇಶ್ ಪ್ರಸಾದ ಪಾಂಡೇಲು, ಸುಬ್ರಾಯ ಭಟ್, ಸುರೇಶ ನೆಗಳಗುಳಿ, ಬಣ್ಣದ ಮಹಾಲಿಂಗ ಯಕ್ಷ ಪ್ರತಿಷ್ಠಾನದ ಗೌರವಾಧ್ಯಕ್ಷ ಕೆ.ಮಹಾಲಿಂಗ ಪಾಟಾಳಿ, ಭಾರತಿ ಪಿಯು ಶಾಲೆ ಪ್ರಿನ್ಸಿಪಾಲ್ ಗಂಗಾರತ್ನ, ಪದವಿ ಪ್ರಿನ್ಸಿಪಾಲ್ ಪ್ರೊ.ಜೀವನ್‌ದಾಸ್, ಅರುಣ ಕುಮಾರಿ, ಕಾಲೇಜ್ ಶಿಕ್ಷಕಿ ನಿಖಿತಾ, ದಯಾನಂದ ರಾವ್ ಕಾವೂರು ಮೊದಲಾದವರು ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅಗಲಿದ ಹಿರಿಯ ಸಾಧಕರ ಭಾವಚಿತ್ರಗಳಿಗೆ ಪುಷ್ಪನಮನವನ್ನು ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು