ಇತ್ತೀಚಿನ ಸುದ್ದಿ
ಅಮೃತ ಮಹೋತ್ಸವ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ತಿರಂಗಾ ಯಾತ್ರೆ: ಪಿವಿಎಸ್ ವೃತ್ತದಲ್ಲಿ ಸಂಪನ್ನ
13/08/2022, 23:06

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆದ ತಿರಂಗಾ ಯಾತ್ರೆಯನ್ನು ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಉದ್ಘಾಟಿಸಿದರು.
ತಿರಂಗಾ ಯಾತ್ರೆಯು ಪುರಭವನದಿಂದ ಪ್ರಾರಂಭಗೊಂಡು ಹಂಪನಕಟ್ಟೆಯ ಮೂಲಕ ಸಾಗಿ ಪಿವಿಎಸ್ ವೃತ್ತದಲ್ಲಿ ಸಂಪನ್ನಗೊಂಡಿತು.