4:13 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಆಂಬ್ಯುಲೆನ್ಸ್ ನಲ್ಲಿ ಗೆಳೆಯರ ಜೊತೆ ಟೆಂಪಲ್ ರನ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ಫೈನ್

11/11/2023, 18:22

ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ. ಆದ್ರೆ ಇಲ್ಲಿ ಓರ್ವ ಚಾಲಕ ತನ್ನ 6 ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ, ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ರು. ಆದ್ರೆ ಕೊಟ್ಟಿಗೆಹಾರ ಅಗಿ ಉಜಿರೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.


ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟಿ ಮೂಲಕ ಉಜಿರೆ ಕಡೆ ಆಂಬುಲೆನ್ಸ್ ನಲ್ಲಿ ಒಟ್ಟು 7 ಜನ ಬರುತ್ತಿರುವ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ. ತಕ್ಷಣ ತಮ್ಮ ಠಾಣೆಯ ಸಿಬ್ಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ. ಅದರಂತೆ ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500/- ಫೈನ್ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು