11:26 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಅಮೆರಿಕದ ಚುನಾವಣೆಯಲ್ಲಿ ಇಂಡಿಯಾದ್ದೇ ನಿರ್ಣಾಯಕ ಪಾತ್ರ: ಭಾರತೀಯ ಮತದಾರರ ಬೆಂಬಲದಿಂದ ಟ್ರಂಪ್ ಗೆಲುವು

07/11/2024, 10:25

ವಾಷಿಂಗ್ಟನ್‌(reporterkarnataka.com): ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌ ಆಯ್ಕೆಯಾಗಿದ್ದು, ಭಾರತೀಯ ಮತದಾರರ ಬೆಂಬಲದಿಂದ ಅವರು ಗೆಲುವು ಸಾಧಿಸಲು ಸಾಧ್ಯವಾಗಿದೆ. ಇದಲ್ಲದೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ನಡೆದ ಟ್ರಂಪ್ ಹತ್ಯೆ ಯತ್ನ ಕೂಡ ಟ್ರಂಪ್ ಅವರ ಕುರಿತು ಮತದಾರರಲ್ಲಿ ಸಹಾನುಭೂತಿ ಮೂಡಿಸಿದೆ ಎಂದು ವ್ಯಾಖ್ಯಾನಿಸಲಾಗಿದೆ.
ವಿಶ್ವದ ಹಿರಿಯಣ್ಣ ಎಂದು ಕರೆಸಿಕೊಳ್ಳುವ ಅಮೆರಿಕ
ಅಧ್ಯಕ್ಷೀಯ ಚುನಾವಣೆ ಇಡೀ ಜಗತ್ತಿನಲ್ಲಿ ಕುತೂಹಲ ಕೆರಳಿಸಿತ್ತು. ವಿಶೇಷವೆಂದರೆ, ಅಧ್ಯಕ್ಷ ಸ್ಥಾನಕ್ಕೆ ಭಾರತ ಮೂಲದ ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಕೂಡ ಸ್ಪರ್ಧಿಸಿದ್ದರು. ಆದರೆ ಅಮೆರಿಕದಲ್ಲಿ ನೆಲೆಸಿರುವ ಬಹುತೇಕ ಭಾರತೀಯರು ಭಾರತ ಮೂಲದ ಕಮಲಾ ಹ್ಯಾರಿಸ್ ಬದಲಿಗೆ ರಿಪಬ್ಲಿಕನ್ ಪಕ್ಷದ
ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸಿದ್ದರು.
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮತದಾರರು ನಿರ್ಣಾಯಕ ಪಾತ್ರ ವಹಿಸಿದ್ದರು. ಭಾರತೀಯರ ಒಲವು ಗಳಿಸಲು
ಡೆಮಾಕ್ರಟಿಕ್‌ ಪಕ್ಷದ ಕಮಲಾ ಹ್ಯಾರಿಸ್‌ ಮತ್ತು ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ಇಬ್ಬರೂ ಪ್ರಯತ್ನಿಸಿದ್ದರು. ಇಬ್ಬರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಈ ಹಿನ್ನೆಲೆಯಲ್ಲೇ ಹಾಲಿ ಅಧ್ಯಕ್ಷ, ಡೆಮಾಕ್ರಟಿಕ್‌ ಪಾರ್ಟಿಯ ನಾಯಕ ಜೋ ಬೈಡೆನ್‌ ಅವರು ಶ್ವೇತಭವನದಲ್ಲಿ ಈ ಸಲ ದೀಪಾವಳಿ ಹಬ್ಬವನ್ನು ಈ ಹಿಂದೆ ಕಂಡರಿಯದ ರೀತಿಯಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಿದ್ದರು. ಇದು ಶ್ವೇತಭವನದಲ್ಲಿ ಇದುವರೆಗೆ ನಡೆದಿರುವ ದೀಪಾವಳಿ ಆಚರಣೆಗಳಲ್ಲೇ ದೊಡ್ಡದಾಗಿತ್ತು. ಅಮೆರಿಕದಲ್ಲಿರುವ 600ಕ್ಕೂ ಹೆಚ್ಚು ಪ್ರಮುಖ ಭಾರತೀಯ ಮೂಲದ ಅಮರಿಕನ್ನರನ್ನು ಬೈಡೆನ್‌ ದೀಪಾವಳಿಗೆ ಆಹ್ವಾನಿಸಿದ್ದರು. ಉಪಾಧ್ಯಕ್ಷ ಹುದ್ದೆಗೆ ಡೆಮಾಕ್ರಟಿಕ್‌ ಪಕ್ಷದಿಂದ ಸ್ಪರ್ಧಿಸಿದ್ದ ಟಿಮ್‌ ವಾಲ್ಜ್‌ ಅವರು ದೇವಾಲಯಕ್ಕೆ ತೆರಳಿ ದೀಪಾವಳಿ ಆಚರಿಸಿದ್ದರು. ಡೊನಾಲ್ಡ್‌ ಟ್ರಂಪ್‌ ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದರು. ಚುನಾವಣಾ ಪ್ರಚಾರದ ಸಂದರ್ಭ ಭಾರತೀಯ ಅಮೆರಿಕರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭ, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯವನ್ನು ಖಂಡಿಸಿದ್ದರು. ಬಾಂಗ್ಲಾದೇಶದ ಹಿಂದೂಗಳ ಸಂರಕ್ಷಣೆಯ ಅಗತ್ಯವನ್ನು ಒತ್ತಿ ಹೇಳಿದ್ದರು. ಕಮಲಾ ಹ್ಯಾರಿಸ್‌ ಮತ್ತು ಬೈಡೆನ್‌ ಹಿಂದೂಗಳ ರಕ್ಷಣೆಯನ್ನು ಕಡೆಗಣಿಸುತ್ತಿದ್ದಾರೆ ಎಂದೂ ಅರೋಪಿಸಿದ್ದರು. ಅಮೆರಿಕ ಮತ್ತು ಜಾಗತಿಕ ಮಟ್ಟದಲ್ಲಿ ಹಿಂದೂಗಳ ಹಕ್ಕುಗಳ ಸಂರಕ್ಷಣೆಯನ್ನು ಪ್ರತಿಪಾದಿಸಿದ್ದರು. ಟ್ರಂಪ್‌ ಅವರ ಈ ಹೇಳಿಕೆಯನ್ನು ಅಮೆರಿಕದಲ್ಲಿರುವ ಭಾರತೀಯರು ಖುಷಿಕೊಟ್ಟಿತ್ತು.
ಅಮೆರಿಕದಲ್ಲಿ ಭಾರತೀಯ ಮೂಲದ 52 ಲಕ್ಷ ಜನರಿದ್ದಾರೆ. ಅಮೆರಿಕದಲ್ಲಿನ ವಲಸೆಗಾರರ ಸಮುದಾಯದಲ್ಲಿ ಎರಡನೇ ದೊಡ್ಡ ಸಮುದಾಯ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು