5:21 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಒಮಿಕ್ರಾನ್ ಭೀತಿ: ರಾಜ್ಯಕ್ಕೆ ಕೇರಳದಿಂದ RTPCR ನೆಗೆಟಿವ್ ರಿಪೋರ್ಟ್ ಕಡ್ಡಾಯ; ದ.ಕ.ದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

27/11/2021, 22:10

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಕೊರೊನ ಏರಿಕೆ ಹಿನ್ನೆಲೆ ಹಾಗೂ

ಕೇರಳದಲ್ಲಿ ಕೊರೋನಾತಂಕ ವಾತಾವರಣವಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಲರ್ಟ್ ಆಗಿರುವಂತೆ ಸರ್ಕಾರ ಸೂಚನೆ ನೀಡಿದೆ. ಜಿಲ್ಲೆಗೆ ಕೋವಿಡ್ ಭೀತಿ ಎದುರಾಗದಂತೆ ತಡೆಯುವಲ್ಲಿ ಮೂರನೇ ಅಲೆ ನಿಯಂತ್ರಿಸಲು ಕೇರಳ ಗಡಿಯಲ್ಲಿ ದಿನ 24 ಗಂಟೆಯೂ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ.

ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಶನಿವಾರ ವೀಡಿಯೊ ಕಾನ್ಫರೆನ್ಸ್ ನಡೆಸಿದ ಮುಖ್ಯಮಂತ್ರಿಗಳು ಕೇರಳದಿಂದ ದ.ಕ.ಕ್ಕೆ ಆಗಮಿಸುವವರ ಮೇಲೆ ವಿಶೇಷ ನಿಗಾ ವಹಿಸುವಂತೆ ಸೂಚಿಸಿದ್ದಾರೆ.

ಕೇರಳ ಗಡಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ಮಾಡಿ 3 ಪಾಳಿಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಬೇಕು. ಕೇರಳದಿಂದ ಬರುವವರೆಲ್ಲರೂ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರುವುದನ್ನು, ಲಸಿಕೆ ಪಡೆದಿರುವುದನ್ನು ಕಡ್ಡಾಯವಾಗಿ ಪರಿಶೀಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು