8:05 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯ ಸೋರಿಕೆ: ನಾಲ್ವರು ಕಾರ್ಮಿಕರು ತೀವ್ರ ಅಸ್ವಸ್ಥ

01/08/2025, 22:57

ಮಂಗಳೂರು(reporterkarnataka.com): ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ನಾಲ್ವರು ಕಾರ್ಮಿಕರು ತೀವ್ರ ಅಸ್ವಸ್ಥಗೊಂಡಿದ್ದು, ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ನಾಲ್ವರಿಗೆ ಉಸಿರಾಟದಲ್ಲಿ ತೀವ್ರ ತೊಂದರೆ ಕಂಡುಬಂದಿದ್ದು ಅವರನ್ನು 24 ಗಂಟೆ ಕಾಲ ತೀವ್ರ ನಿಗಾದಲ್ಲಿ ಇರಿಸಲಾಗುವುದು ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಒಟ್ಟು ಸುಮಾರು 25 ಮಂದಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಂಗಳೂರು ವಿಭಾಗ ಸಹಾಯಕ ಆಯುಕ್ತ ಹರ್ಷವರ್ಧನ್ ಸೂಚನೆಯಂತೆ ಸ್ಥಳಕ್ಕೆ ಮಂಗಳೂರು ತಾಲೂಕು ತಹಸೀಲ್ದಾರ್ ರಮೇಶ್ ಬಾಬು, ಸುರತ್ಕಲ್ ಹೋಬಳಿ ಉಪ ತಹಸೀಲ್ದಾರ್ ನವೀನ್,ಆರ್.ಐ ಪ್ರಸಾದ್, ಗ್ರಾಮ ಕರಣಿಕರಾದ ಅನುಷಾ ಆಗಮಿಸಿ ತುರ್ತು ಕ್ರಮ ಕೈಗೊಂಡಿದ್ದಾರೆ.
ಅಲ್ಲದೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಅಗ್ನಿ ಶಾಮಕ ದಳ ಹಾಗೂ ಪಣಂಬೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಘಟಕದಲ್ಲಿ ಸುಮಾರು 200 ಮಂದಿ ಕೆಲಸ ಮಾಡುತ್ತಿದ್ದರು.
ಅನಿಲ ಸೋರಿಕೆಯಿಂದಾಗಿ ಪರಿಸರದಲ್ಲಿ ಸಾಕಷ್ಟು ದುರ್ವಾಸನೆ ಆವರಿಸಿದ್ದು ಕೈಗಾರಿಕಾ ಘಟಕಗಳ ಕಾರ್ಮಿಕರು ಭೀತಿಗೊಂಡು ರಸ್ತೆಗೆ ಓಡಿ ಬಂದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು