12:20 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ: ವಿಧಾನ ಪರಿಷತ್ ನಲ್ಲಿ ಸಚಿವ ಈಶ್ವರ ಖಂಡ್ರೆ

10/03/2026, 20:00

ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು: ಈಶ್ವರ ಖಂಡ್ರೆ

ಬೆಂಗಳೂರು(reporterkarnataka.com): ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ವಿಧಾನ ಪರಿಷತ್ತಿಗಿಂದು ತಿಳಿಸಿದ್ದಾರೆ.

ಶೂನ್ಯವೇಳೆಯಲ್ಲಿ ಸುಜಾ ಕುಶಾಲಪ್ಪ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಫೆ.28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದರೆ, ಮಾ.9ರಂದು ಕಾಡಿನೊಳಗೇ ವಾಸಿಸುತ್ತಿದ್ದ 55 ವರ್ಷದ ಬುಡಕಟ್ಟು ಮಹಿಳೆ ಸಾವಿಗೀಡಾಗಿದ್ದಾರೆ ಇದು ಅತ್ಯಂತ ನೋವಿನ ಸಂಗತಿ ಎಂದರು.
ಜೀವ ಅತ್ಯಂತ ಅಮೂಲ್ಯವಾದ್ದು, ಇದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆನೆ ನಿಗ್ರಹ ಕಂದಕ, ಸೌರ ವಿದ್ಯುತ್ ಬೇಲಿ ನಿರ್ವಹಣೆ ಮಾಡಲಾಗುತ್ತಿದೆ. 2 ಆನೆ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಈಗ 2 ಪುಂಡಾನೆಗಳ ಸೆರೆಗೆ ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶ ನೀಡಿದ್ದಾರೆ ಎಂದು ತಿಳಿಸಿದರು.
ಈ ಎರಡೂ ಪ್ರಕರಣದಲ್ಲಿ ಈಗಾಗಲೇ 5 ಲಕ್ಷ ರೂ. ಪರಿಹಾರವನ್ನು ಮೃತರ ಹತ್ತಿರದ ಬಂಧುಗಳಿಗೆ ವಿತರಿಸಲಾಗಿದ್ದು, ವಾರದೊಳಗೆ ಉಳಿಕೆ ತಲಾ 15 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಶಾಶ್ವತ ಪರಿಹಾರ ಕ್ರಮಗಳ ಬಗ್ಗೆಯೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು