8:02 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ; 1.19 ಲಕ್ಷ ಮೌಲ್ಯದ ಕೀಟನಾಶಕ ವಶ

01/10/2023, 22:51

ಮಂಗಳೂರು(reporterkarnataka.com): ಅನಧಿಕೃತ ಕೃಷಿ ಕೀಟ ನಾಶಕಗಳನ್ನು ಮಾರಾಟ ಮಾಡುತ್ತಿದ್ದ ಮುಲ್ಕಿ ಹೋಬಳಿಯ ಕಾರ್ನಾಡು ಗ್ರಾಮ ಸನ್ ಕೆಮಿಕಲ್ ಕಂಪನಿಯ ಮಳಿಗೆ ಮೇಲೆ ಕೃಷಿ ಜಾರಿದಳ ದಾಳಿ ನಡೆಸಿ, ಸುಮಾರು 1.19 ಲಕ್ಷ ರೂ. ಮೌಲ್ಯದ ಕೀಟನಾಶಕ ವಶಪಡಿಸಿಕೊಂಡಿದೆ.
ಕೃಷಿ ಜಾರಿದಳದ ಮೈಸೂರು ವಿಭಾಗದ ಉಪ ಕೃಷಿ ನಿರ್ದೇಶಕ ನಾಗರಾಜ್ ರೆಡ್ಡಿ, ಮಂಗಳೂರು ತಾಲೂಕು ಹಾಗೂ ಜಾರಿದಳ ಸಹಾಯಕ ಕೃಷಿ ನಿರ್ದೇಶಕರಾದ ವೀಣಾ ಕೆ.ಆರ್., ಮೈಸೂರು ವಿಭಾಗದ ಕೃಷಿ ಅಧಿಕಾರಿ ದಿವಾಕರ್ ಹಾಗೂ ಸಿಬ್ಬಂದಿ ಷಣ್ಮುಖ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ 1.19 ಲಕ್ಷ ರೂ.ಗಳ ಮೌಲ್ಯದ ಕಾಪರ್ ಸಲ್ಫೈಡ್ ಹಾಗೂ ಮೈಲುತುತ್ತು ಕೀಟನಾಶಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೃಷಿ ಜಾರಿದಳ ಹಾಗೂ ಎಲ್ಲಾ ತಾಲೂಕಿನ ಗುಣ ನಿಯಂತ್ರಣ ಪರಿವೀಕ್ಷಕರ ದಳವು ಅನಧಿಕೃತವಾಗಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ದಾಸ್ತಾನು ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಿದೆ ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು