7:12 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡವರ ಬಗ್ಗೆ ಮಾಹಿತಿ ನೀಡಲು ಸೂಚನೆ

21/09/2022, 21:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಪತ್ರಕರ್ತರ ಸಂಘಕ್ಕೆ ಮಾಹಿತಿ ನೀಡಿ ಎಂದು ಮೂಡಿಗೆರೆ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಕಾರ್ಯದರ್ಶಿ ಶಿವಕಾಶಿ ಯು.ಆರ್. ಹೇಳಿದರು.

ಮೂಡಿಗೆರೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತರಲ್ಲದೇ ಇರುವವರು ಅನಧಿಕೃತವಾಗಿ ವಾಹನಗಳಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಮತ್ತು ಯೆಲ್ಲೋ ಬೋರ್ಡ್ ವಾಹನದಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡು ಪತ್ರಕರ್ತರೆಂದು ಓಡಾಡಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಮೂಡಿಗೆರೆ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಮೂಡಿಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಪತ್ರಕರ್ತರಲ್ಲದೇ ಇದ್ದರೂ ಕೂಡ ನಕಲಿ ಪ್ರೆಸ್ ಐಡಿ ಹೊಂದಿರುವುದು ಮತ್ತು ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸಾರ್ವಜನಿಕರು ಪತ್ರಕರ್ತರ ಸಂಘ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ. ಅಂತಹವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ ಎಂದರು. 

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷರಾದ ಉದಯಶಂಕರ್, ಸದಸ್ಯರಾದ ಪ್ರಸನ್ನ ಗೌಡಹಳ್ಳಿ, ನಂದೀಶ್ ಬಂಕೇನಹಳ್ಳಿ, ಸೊಮಶೇಖರ್, ಶಾರದಶೇಖರ್, ಆನಂದ್ ಕಣಚೂರು, ವಿಜಯಕುಮಾರ್, ಪ್ರವೀಣ್ ಪೂಜಾರಿ, ಸಂತೋಷ್ ಅತ್ತಿಗೆರೆ, ಪ್ರಕಾಶ್ ಬಿ.ಪಿ, ತನು ಕೊಟ್ಟಿಗೆಹಾರ, ನಯನ ತಳವಾರ, ಅಮರನಾಥ್, ಪ್ರಸನ್ನಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು