3:58 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಅನಂತ ಅಭಿನಂದನೆ: ಕಡಲನಗರಿಯಲ್ಲಿ ನಟ ಅನಂತನಾಗ್ ದಂಪತಿಗೆ ಸಾರೋಟು ಮೆರವಣಿಗೆ

03/09/2023, 17:27

ಮಂಗಳೂರು(reporterkarnataka.com): ಕಡಲನಗರಿಯಲ್ಲಿ ಸಂಭ್ರಮ ನೆಲೆಸಿತ್ತು. ವಿಶೇಷವಾಗಿ ಸಿಂಗರಿಸಿದ ಸಾರೋಟಿನಲ್ಲಿ
ಕುಳಿತ ಆ ದಂಪತಿಯ ನೋಡಲು ರಸ್ತೆಯ ಇಕ್ಕೆಲೆಗಳಲ್ಲಿ ಜನರು ಸೇರಿದ್ದರು.
ಸಾರೋಟು ಮೆರವಣಿಗೆ ಡೊಂಗರಕೇರಿಯಲ್ಲಿರುವ
ಕೆನರಾ ಹೈಸ್ಕೂಲಿನ ಮುಂಭಾಗದಿಂದ ಆರಂಭಗೊಂಡು ಮುಖ್ಯರಸ್ತೆಯ ಮೂಲಕಮೆರವಣಿಗೆ ಟಿ. ವಿ. ರಮಣ್ ಪೈ ಸಭಾಂಗಣಕ್ಕೆ ಆಗಮಿಸಿತು.


ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಅನಂತನಾಗ್ ಅಭಿನಂದನಾ ಸಮಿತಿ ವತಿಯಿಂದ ಪ್ರಸಿದ್ಧ ಚಿತ್ರನಟ ಅನಂತನಾಗ್ ಅವರ 75ನೇ ವರ್ಷದ ಹುಟ್ಟುಹಬ್ಬ ಹಾಗೂ ವೃತ್ತಿಜೀವನದ 50ನೇ ವರ್ಷದ ಸಂಭ್ರಮಾಚರಣೆ‌ ಅನಂತ ಅಭಿನಂದನೆ ಕಾರ್ಯಕ್ರಮ ಇದಾಗಿತ್ತು.
ಡೊಂಗರಕೇರಿಯಲ್ಲಿರುವ ಕೆನರಾ ಹೈಸ್ಕೂಲಿನಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪುತ್ಥಳಿಗೆ ಅನಂತನಾಗ್ ಅವರು ಹಾರಾರ್ಪಣೆ ಮಾಡಿ ಶ್ರೇಷ್ಠ ಶಿಕ್ಷಣ ಮತ್ತು ಬ್ಯಾಂಕಿಂಗ್ ತಜ್ಞನಿಗೆ ಗೌರವ ಸಲ್ಲಿಸಿದರು.
ಸಾರೋಟಿನಲ್ಲಿ ಅನಂತನಾಗ್ ದಂಪತಿಯನ್ನು ಕುಳ್ಳಿರಿಸಿ ಮುಖ್ಯರಸ್ತೆಯಲ್ಲಿ ಮೆರವಣಿಗೆ ಮೂಲಕ ಸಾಗಿ ಟಿ ವಿ ರಮಣ್ ಪೈ ಸಭಾಂಗಣಕ್ಕೆ ಕರೆದುಕೊಂಡು ಬರಲಾಯಿತು. ದಾರಿಯುದ್ದಕ್ಕೂ ಹುಲಿವೇಷ‌ ಕುಣಿತ, ಸೆಕ್ಸಪೋನ್, ಬೊಂಬೆಗಳು, ಮಕ್ಕಳಿಂದ ಅನಂತನಾಗ್ ಸಿನೆಮಾ ಪಾತ್ರಗಳ ವೇಷಭೂಷಣ, ಬಾಜಾ ಭಜಂತ್ರಿಗಳ ಅಬ್ಬರದಲ್ಲಿ ಅನಂತನಾಗ್ ಅಭಿಮಾನಿಗಳು ಸಂಭ್ರಮಿಸಿದರು.
ಬೆಳಿಗ್ಗೆ ಶಾಸಕ ವೇದವ್ಯಾಸ ಕಾಮತ್ ಮುಂದಾಳತ್ವದಲ್ಲಿ ಅನಂತನಾಗ್ ಹಾಗೂ ಗಾಯತ್ರಿ ನಾಗ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಆ ಬಳಿಕ ನಡೆದ ಸಂವಾದದಲ್ಲಿ ಕಾಸರಗೋಡು ಚಿನ್ನಾ, ದಿನೇಶ್ ಮಂಗಳೂರು, ಲಕ್ಷ್ಮಣ್ ಕುಮಾರ್ ಮಲ್ಲೂರು, ಸದಾಶಿವ ಶೆಣೈ‌ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಮನೋಹರ್ ಪ್ರಸಾದ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು