6:26 PM Tuesday6 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಆಂಧ್ರಪ್ರದೇಶ ರಸ್ತೆ ದುರಂತ: ಮೃತಪಟ್ಟ ಅಥಣಿಯ ಒಂದೇ ಕುಟುಂಬದ ನಾಲ್ವರು ಸೇರಿದಂತೆ 5 ಮಂದಿಯ ಅಂತ್ಯಕ್ರಿಯೆ; ಮುಗಿಲು ಮುಟ್ಟಿದ ಗ್ರಾಮಸ್ಥರ ಆಕ್ರಂಧನ

18/09/2023, 12:11

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.ಕಂ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡು ವಾಪಸ್ ಬರುವಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಒಂದೇ ಕುಟುಂಬದ 5 ಮಂದಿಯ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು‌.


ಸೆಪ್ಟೆಂಬರ್ 15 ರಂದು ಲಾರಿ ಮತ್ತು ಕ್ರೂಜರ್‌ ವಾಹನ ಡಿಕ್ಕಿ ಹೊಡೆದು ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿ, ಕಡಪ-ಚಿತ್ತೂರು ರಸ್ತೆಯಲ್ಲಿ ಅಥಣಿ ಮೂಲದ ಒಂದೇ ಕುಟುಂಬದ ನಾಲ್ವರು ಹಾಗೂ ಅದೇ ಗ್ರಾಮದ ಇನ್ನೊಬ್ಬರು ಒಟ್ಟು 5 ಜನ ಸಾವನ್ನಪ್ಪಿದ್ದರು.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡು ಬರುವಾಗ
ಈ ಘೋರ ದುರಂತ ಸಂಭವಿಸಿತ್ತು. ಅಪಘಾತದಲ್ಲಿ ಐದು ಜನ ಸಾವು ಸಂಭವಿಸಿ 11 ಜನರಿಗೆ ಗಾಯಗೊಂಡಿದ್ದರು. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಶೋಭಾ ಆಜೂರ (36), ಮಗಳು ಅಂಬಿಕಾ ಆಜೂರ(14) ಹನುಮಂತ ಆಜೂರ (42)ಹಾಗೂ ಪತ್ನಿ ಮಹಾನಂದಾ ಆಜೂರ(32), ಕ್ರೂಸರ್ ವಾಹನ ಚಾಲಕ ಹನುಮಂತ ಜಾಧವ್‌ ಸೇರಿ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು.
ಸ್ವಗ್ರಾಮಕ್ಕೆ ಪಾರ್ಥೀವ ಶರೀರ ಆಗಮಿಸುತ್ತಿದ್ದಂತೆ ಗ್ರಾಮದಲ್ಲಿ ದುಃಖ ಮಡುಗಟ್ಟಿತ್ತು. ದೂರದ ಊರಿಗೆ ಹೋದ ಕುಟುಂಬ ಹೆಣವಾಗಿ ಮರಳಿ ಬಂದದ್ದು ದುರಂತ. ಆಜೂರು ಕುಟುಂಬದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಮುಗಿಸಿದ್ದಾರೆ. ಅದೇ ಅಪಘಾತದಲ್ಲಿ
ಗಂಭೀರ ಗಾಯಗೊಂಡ ಕಸ್ತೂರಿ ಎಂಬುವವರು ಬೆಂಗಳೂರು ಆಸ್ಪತ್ರೆಯಿಂದ ಬೆಳಗಾವಿಗೆ ಬರುವಾಗ ರಾತ್ರಿ ರಸ್ತೆ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದರು. ಅಂತ್ಯಕ್ರಿಯೆಯಲ್ಲಿ ಅಥಣಿ ಶಾಸಕ ಲಕ್ಷ್ಮಣ್ ಸವದಿ ಹಾಗೂ ಮಾಜಿ ಶಾಸಕ ಕುಮಠಳ್ಳಿ ಬಾಗಿಯಾಗಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಥಣಿ ತಾಲೂಕಿನ ಬಡಚಿ ಗ್ರಾಮದಲ್ಲಿ ದುಃಖದ ವಾತಾವರಣ ಮಡುಗಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು