7:44 PM Monday7 - July 2025
ಬ್ರೇಕಿಂಗ್ ನ್ಯೂಸ್
Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು

ಇತ್ತೀಚಿನ ಸುದ್ದಿ

ಆಂಧ್ರಪ್ರದೇಶ: ಭೀಕರ ರಸ್ತೆ ಅಪಘಾತಕ್ಕೆ ಬೆಳಗಾವಿ ಮೂಲದ 5 ಮಂದಿ ಸ್ಥಳದಲ್ಲೇ ಸಾವು; 7 ಮಂದಿ ಗಂಭೀರ

17/09/2023, 22:45

ಕಡಪ(reporterkarnataka.com): ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡ ಘಟನೆ ಆಂದ್ರಪ್ರದೇಶದ ಅಣ್ಣಮಯ ಜಿಲ್ಲೆಯಲ್ಲಿ ನಡೆದಿದೆ.
ಮೃತರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಗಾಯಾಳುಗಳಲ್ಲಿ 7 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ತೆರಳುತ್ತಿದ್ದ ಬೆಳಗಾವಿ ಮೂಲದ 16 ಭಕ್ತರು ಕ್ರೂಸರ್ ವಾಹನದಲ್ಲಿ ಕಡಪದಿಂದ ಚಿತ್ತೂರಿಗೆ ಪ್ರಯಾಣ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈವರೆಗೂ ಮೃತರ ಗುರುತು ಪತ್ತೆಯಾಗಿಲ್ಲ.
ಅಪಘಾತದಲ್ಲಿ ಗಾಯಗೊಂಡವರನ್ನು ತಿರುಪತಿ ರೂವಾ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂದು ಪೊಲೀಸ್ ಅಧಿಕಾರಿ ನಾಗಬಾಬು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು