4:17 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | 23ರಂದು ಜಿಲ್ಲಾಮಟ್ಟದ ಗ್ಯಾರಂಟಿ ಸಮಾವೇಶ: ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆ

20/12/2025, 09:24

ಮಂಗಳೂರು(reporterkarnataka.com): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಂಗಳೂರು ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು.
ಸಭೆಯಲ್ಲಿ ಇದೇ ಡಿಸಂಬರ್‌ 23ರಂದು ಮಂಗಳೂರಿನ ಪುರಭವನದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶದ ತಯಾರಿ ಬಗ್ಗೆ ಚರ್ಚಿಸಲಾಯಿತು. ಸಮಾವೇಶಕ್ಕೆ ಬರುವ ಫಲಾನುಭವಿಗಳನ್ನು ಕರೆತರಲು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಕೆಎಸ್‌ ಆರ್‌ ಟಿ ಸಿ ಬಸ್ಸುಗಳ ವ್ಯವಸ್ಥೆ ಮಾಡಿಸುವಂತೆ ಸದಸ್ಯರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಇದೇವೇಳೆ ಯುವನಿಧಿಗೆ ನೋಂದಣಿ ಮಾಡಿಕೊಳ್ಳುವ ಉದ್ದೇಶದಿಂದ ಸಮಾವೇಶದಲ್ಲಿ ಸ್ಟಾಲ್‌ ಗಳನ್ನು ಹಾಕಲಾಗುವುದು ಎಂದು ಸಭೆಯಲ್ಲಿ ಮಾಹಿತಿ ನೀಡಿದರು.

ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ, ಸಮಿತಿಯ ಸದಸ್ಯ ಮಹೇಶ್‌ ಕುಮಾರ್‌ ಹೊಳ್ಳ ಇಲಾಖಾ ಅಧಿಕಾರಿಗಳಿಗೆ ಸ್ವಾಗತಿಸಿದರು. ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಅಲ್ ಸ್ಟನ್ ಡಿ ಕುನ್ಹ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳಾದ ಪ್ರಶಾಂತ್ ಎಸ್., ನವಾಜ್, ಶೈಲಾ ನೀತಾ ಡಿ ಸೋಜಾ, ರಿತೇಶ್ ಅಂಚನ್, ವಿದ್ಯಾ, ಶ್ರೀಧರ ಪಂಜ , ಮೊಹಮ್ಮದ್ ಮುಸ್ತಾಪ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು, ತಾಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ಪರಮೇಶ್ವರ, ತಾಲೂಕು ಪಂಚಾಯತ್‌ ವ್ಯವಸ್ಥಾಪಕಿ ಸುವರ್ಣಾ ಹೆಗಡೆ, ವಿಷಯ ನಿರ್ವಾಹಕ ಆರೀಸ್‌ ಹಾಗೂ ತಾಲೂಕು ಐಇಸಿ ಸಂಯೋಜಕಿ ನಿಶ್ಮಿತಾ ಬಿ. ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು