10:12 AM Thursday9 - January 2025
ಬ್ರೇಕಿಂಗ್ ನ್ಯೂಸ್
ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2… ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ… ಇದು 60 ಪರ್ಸೆಂಟ್‌ ಕಮಿಷನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ… ಹಣ ಕೈಯಲ್ಲಿದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ… ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ… ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ

ಇತ್ತೀಚಿನ ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

09/01/2025, 09:26

ಬೆಂಗಳೂರು(reporterkarnataka.com): ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.
ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು.
ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚೆ ನಡೆಸಿದರು‌‌‌.
ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ‌ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಎಐಟಿಯುಸಿ ಕಾರ್ಯದರ್ಶಿ ಎಂ.ಜಯಮ್ಮ, ಶಿವಶಂಕರ್, ಸಿಐಟಿಯು ಸಂಘಟನೆಯ ಸುನಂದ, ಎಐಯುಟಿಯುಸಿ ಉಮಾ, ಸ್ವತಂತ್ರ ಸಂಘಟನೆಯ ಪ್ರೇಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು