8:54 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಅಂಗನವಾಡಿ: 2011ರ ನಂತರ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿ; ಸಿಎಂ ಜೊತೆ ಚರ್ಚಿಸಿ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

20/03/2025, 16:53

ಬೆಂಗಳೂರು(reporter Karnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲಿ 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಪಾವತಿ ಮಾಡುವ ಕುರಿತು, ಅಂಗನವಾಡಿಯ ವಿವಿಧ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಚರ್ಚೆ ನಡೆಸಿದರು.
ಗೌರವ ಧನ ಹೆಚ್ಚಳ, ನಿವೃತ್ತಿಯಾದ ಎಲ್ಲರಿಗೂ ಗ್ರ್ಯಾಚುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸುತ್ತಾ ಬಂದಿವೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ‌ ಜೊತೆ ಚರ್ಚೆ ನಡೆಸಿ‌‌ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಈಗಾಗಲೇ ಸರ್ಕಾರ 2023-24ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ನಿವೃತ್ತಿ ಬಳಿಕ ಗ್ರ್ಯಾಚ್ಯುಟಿಗೆ ಆಡಳಿತಾತ್ಮಕ ಅನುಮತಿ ನೀಡಲಾಗಿದೆ. ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಸಂಘಟನೆಗಳ ಬೇಡಿಕೆಯಂತೆ 2011ರಿಂದ ಗ್ರ್ಯಾಚ್ಯುಟಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.


ಸಭೆಯಲ್ಲಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ‌ಬಿ.ಎಚ್‌.ನಿಶ್ಚಲ್, ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಎಐಟಿಯುಸಿ ಅಂಗನವಾಡಿ ಸಂಘಟನೆಯ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಅಂಗನವಾಡಿ ನೌಕರರ‌ ಸಂಘದ ರಾಜ್ಯಾಧ್ಯಕ್ಷರಾದ ವರಲಕ್ಷ್ಮೀ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ನಾಗರತ್ನ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು