12:38 AM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ; ಬೇಡಿಕೆ ಈಡೇರಿಕೆ ಭರವಸೆ

19/03/2025, 23:15

ಬೆಂಗಳೂರು(reporterkarnataka.com): ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ದವಾಗಿದೆ‌‌. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗೌರವಧನ ಹೆಚ್ಚಳ ಹಾಗೂ ನಿವೃತ್ತಿಯಾದ ಎಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ಜಾರಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಸಚಿವರು ಮಾತನಾಡಿದರು.‌
ಮಹಿಳೆಯರ ಸಬಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ನಡುವೆಯೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಈ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸಲಾಗಿದೆ ಎಂದರು.
*ನಾಳೆ ಸಂಘಟನೆಗಳೊಂದಿಗೆ ಸಭೆ:*
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಎಲ್ಲಾ ಸಂಘಟನೆಗಳೊಂದಿಗೆ ವಿಧಾನಸೌಧದಲ್ಲಿ ಗುರುವಾರ ಸಭೆ ನಡೆಸುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಈ ವೇಳೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಎಐಟಿಯುಸಿ ಅಂಗನವಾಡಿ ಸಂಘಟನೆಯ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ನಾಗರತ್ನ, ಸೋಮಶೇಖರ್ ಯಾದಗಿರಿ, ಉಮಾದೇವಿ ಸೇರಿದಂತೆ ನೂರಾರು ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು