11:46 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ

24/04/2024, 23:23

ಮಂಗಳೂರು(reporterkarnataka.com): ಹತ್ತಾರು ವಿನೂತನ ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ 10 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇತ್ತೀಚಿಗೆ ಉಚ್ಚಿಲ ಸೋಮೇಶ್ವರ ಕಿಯಂಝಾ ಗಾರ್ಡನ್ ನಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಪಾಣಕ್ಕಾಡ್ ಸ್ವಾಬಿಕಲಿ ಶಿಹಾಬ್ ತಂಙಳ್ ದುಆ ನೆರವೇರಿಸಿದರು. ಸೆಯ್ಯದ್ ಅಲೀ ತಂಙಳ್ ಕುಂಬೋಲ್ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಯ್ಯದ್ ಜಿಫ್ರಿ ತಂಗಳ್ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಖಾಹ್ ನೇತೃತ್ವ ವಹಿಸಿದರು. ಸಯ್ಯದ್ ಜಮಲುಲ್ಲೈಲಿ ತಂಙಳ್ ಕಾಜೂರು ಲೋಗೋ ಬಿಡುಗಡೆಗೊಳಿಸಿದರು.
ಸಮಸ್ತ ಮುಶಾವರ ಬಿ.ಕೆ.ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ, ಉಸ್ಮಾನುಲ್ ಫೈಝಿ ತೋಡಾರ್, ಫಿರೋಝ್ ಕುಂನ್ನುಪರಂಬಿಲ್, ಬದ್ರುದ್ದೀನ್ ಅಝ್ಹರಿ, ಹುಸೈನ್ ದಾರಿಮಿ, ಎಸ್.ಬಿ ದಾರಿಮಿ, ಅನೀಸ್ ಕೌಸರಿ ರಫೀಕ್ ಮಾಸ್ಟರ್, ಝಕಾರಿಯ ಮೋಡುಶೆಡ್ಡೆ, ಸಹೋದರ ಬಶೀರ್, ಖಲೀಲ್ ಒಗ್ಗ, ನೌಶಾದ್ ಇನೋಳಿ ಮತ್ತಿತರರು ಉಪಸ್ಥಿತರಿದ್ದರು.
ಜಮಾಲುದ್ದೀನ್ ದಾರಿಮಿ ಕುತುಬಾ ಪಾರಾಯಣ ನೆರವೇರಿಸಿದರು. ಸಂಘಟಕರಾದ ಇಮ್ರಾನ್ ಅಡ್ಡೂರು ಸ್ವಾಗತಿಸಿ, ಇಕ್ಬಾಲ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು