7:40 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅನಿಯಮಿತ ವಿದ್ಯುತ್ ಕಡಿತ: ಡಿವೈಎಫ್ಐ ಆಕ್ರೋಶ; ಹೋರಾಟದ ಎಚ್ಚರಿಕೆ

12/08/2023, 19:12

ಮಂಗಳೂರು(reporterkarnataka.com): ಕಳೆದ ಒಂದು ವಾರಗಳಿಂದ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಯವರು ಯಾವುದೇ ಪ್ರಕಟಣೆ ಇಲ್ಲದೆ ಲೋಡ್ ಶೆಡ್ಡಿಂಗ್ ನಡೆಸುತ್ತಿರುವುದು ತೀರಾ ಖಂಡನೀಯ ಕ್ರಮವಾಗಿದೆ ಎಂದು ಡಿವೈಎಫ್ಐ ಆಪಾದಿಸಿದೆ. ಕರ್ನಾಟಕ ರಾಜ್ಯ ಸರಕಾರ ಗೃಹಜ್ಯೋತಿ ಯೋಜನೆ ಜಾರಿ ಮಾಡಿರುವ ಬೆನ್ನಲ್ಲೇ ದಿನನಿತ್ಯ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ನೀತಿ ಎಂದು ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿ ಸರಕಾರವನ್ನು ಪ್ರಶ್ನಿಸಿದೆ.
ಅನಿಯಮಿತ ಲೋಡ್ ಶೆಡ್ಡಿಂಗ್ ಬಗ್ಗೆ ಕಾರಣಗಳನ್ನು ಮೆಸ್ಕಾಂ ಅಧಿಕಾರಿಗಳನ್ನು ಕೇಳಿದರೆ ಸಮರ್ಪಕ ಉತ್ತರ ಸಿಗುತ್ತಿಲ್ಲ, ಮೆಸ್ಕಾಂ ಕಚೇರಿಗಳಲ್ಲಿ ಸಿಬ್ಬಂದಿಗಳಿಗೂ ಲೋಡ್ ಶೆಡ್ಡಿಂಗ್ ಬಗ್ಗೆ ಮಾಹಿತಿ ಇರುವುದಿಲ್ಲ. ವಿದ್ಯುತ್ ಅಭಾವ ಇದೆಯೇ? ಇಂಧನ ಕೊರತೆಯೇ? ವಿದ್ಯುತ್ ಖರೀದಿಗೆ ಹಣಕಾಸಿನ ಸಂಕಷ್ಟ ಇದೆಯೇ ಎಂಬುದರ ಬಗ್ಗೆ ಸರಕಾರ ಕೂಡಲೇ ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು ಎಂದು ಡಿವೈಎಫ್ಐ ಆಗ್ರಹಿಸಿದೆ.
ಈಗಾಗಲೇ ಲೋಡ್ ಶೆಡ್ಡಿಂಗ್ ನಿಂದ ರೈತರು , ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಬಹುತೇಕ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಮಾತ್ರವಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯ ಹತ್ತಿರ ಬರುತ್ತಿದ್ದು ಅವರ ಕಲಿಕೆ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಲಿದೆ. ಮೆಸ್ಕಾಂ ಇಲಾಖೆ ಕೂಡಲೇ ಲೋಡ್ ಶೆಡ್ಡಿಂಗ್ ಕೈಬಿಟ್ಟು ಜನರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ವಿಫಲವಾದಲ್ಲಿ ಜಿಲ್ಲೆಯ ಎಲ್ಲಾ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಎಚ್ಚರಿಕೆಯನ್ನು ನೀಡಿದೆ. ಈ ಬಗ್ಗೆ ಡಿವೈಎಫ್ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು