12:03 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮಹಾಲಕ್ಷ್ಮಿಪುರಂ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ದೇವಾಲಯದಲ್ಲಿ ಆಂಜನೇಯ, ಮಹಾಗಣಪತಿ ಲಲಿತಾಂಬಿಕೆ ಪ್ರತಿಷ್ಠಾಪನೆ

14/04/2025, 16:42

ಬೆಂಗಳೂರು(reporterkarnataka.com): ಮಹಾಲಕ್ಷ್ಮಿಪುರಂನಲ್ಲಿರುವ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ದೇವಾಲಯದಲ್ಲಿ ಶ್ರೀ ಅಭಯ ಆಂಜನೇಯ, ಮಹಾಗಣಪತಿ ಮತ್ತು ಲಲಿತಾಂಬಿಕೆ ದೇವರುಗಳನ್ನು ಪ್ರತಿಷ್ಠಾಪಿಸಲಾಯಿತು.


ಕಾರ್ಯಕ್ರಮಕ್ಕೆ ವಿಜಯನಗರ ಆದಿ ಚುಂಚನಗಿರಿ ಮಠದಿಂದ ಆಂಜನೇಯಸ್ವಾಮಿ ದೇವರ ವಿಗ್ರಹವನ್ನು ಮೆರವಣಿಗೆಯಲ್ಲಿ ಶಂಕರ ಮಠ ವೃತ್ತ ಕ್ಕೆ ಬಂದ ಮೆರವಣಿಗೆಯನ್ನು ಶ್ರೀ ಜಗದ್ಗುರು ನಿರ್ಮಾಲಾನಂದ ನಾಥ ಸ್ವಾಮೀಜಿಗಳು, ಆವನೀ ಶೃಂಗೇರಿ ಶಾಖಾ ಮಠದ ಶ್ರೀ ಅದ್ವೈತಾನಂದ ಸ್ವಾಮೀಜಿ, ವಿಜಯನಗರ ಚುಂಚನಗಿರಿ ಶಾಖಾಮಠದ ಸೌಮ್ಯನಾಥ ಸ್ವಾಮೀಜಿ ಹಾಗೂ ಶಾಸಕ ಕೆ. ಗೋಪಾಲಯ್ಯ ಅವರು ಬರಮಾಡಿಕೊಂಡರು. ಅಲ್ಲಿಂದ 500ಕ್ಕೂ ಹೆಚ್ಚು ಕಳಸ ಹೊತ್ತ ಮಹಿಳೆಯರೊಂದಿಗೆ ಚಂಡೆ ಮೇಳ, ಕೊಂಬು ಕಹಳೆ, ಕಲಾತಂಡ ಹಾಗೂ ಭೂತದ ಕೋಲ , ಶ್ರೀರಾಮ ,ಹನುಮ , ಲಕ್ಷ್ಮಣ ,ದೇಶಭೂಷಣ ತೊಟ್ಟ ಕಲಾವಿರು ಹಾಗೂ ಸಾವಿರಾರು ಭಕ್ತರು ಕ್ಷೇತ್ರದ ಮುಖಂಡರುಗಳು ಒಳಗೊಂಡ ಮೆರವಣಿಗೆ ನಾಗಪುರದಲ್ಲಿರುವ ಬಿಜಿಎಸ್ ಶಾಲಾ ಅವರಣದಲ್ಲಿ ಸಮಾವೇಶಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು