6:16 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಅಂಕಪಟ್ಟಿ ಸಂಬಂಧಿಸಿದಂತೆ ಕಳೆದ ತಿಂಗಳೇ ಮನವಿ ಸಲ್ಲಿಸಿದ್ದೇವೆ; ಎಬಿವಿಪಿ ಗೂಂಡಾಗಿರಿ ಖಂಡನೀಯ: ಎನ್ ಎಸ್ ಯುಐ

16/11/2024, 11:32

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಅಂಕಪಟ್ಟಿ ಸಂಬಂಧಿಸಿದಂತೆ ಎನ್ ಎಸ್ ಯುಐ ಉಳ್ಳಾಲ ತಾಲೂಕು ಸಮಿತಿಯು ಕಳೆದ ತಿಂಗಳು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮತ್ತು ಉನ್ನತ ಶಿಕ್ಷಣ ಸಚಿವರನ್ನು‌ ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ‌ ಮಾಡಿದ್ದು, ಸ್ಪೀಕರ್ ಖಾದರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಶೀಘ್ರವೇ ಪರಿಹರಿಸುವ ಭರವಸೆ ನೀಡಿದ್ದಾರೆ.
ಆದರೆ ಎಬಿವಿಪಿ ಸಂಘಟನೆ ಇಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳ ಗಂಗೋತ್ರಿಯಲ್ಲಿ ಪ್ರತಿಭಟನೆ ನಡೆಸಿ ಕೆಲ ಎಬಿವಿಪಿ ನಾಯಕರು ಗೂಂಡಾಗಿರಿ ಮಾಡಿ ವಿಶ್ವವಿದ್ಯಾನಿಲಯದ ಗಾಜನ್ನು ಪುಡಿ ಮಾಡಿದ್ದಾರೆ.
ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಪ್ರತಿಭಟಿಸುವುದು ಪ್ರತಿ ವಿದ್ಯಾರ್ಥಿ ಸಂಘಟನೆಗಳ ಹಕ್ಕಾಗಿದೆ, ಇದಕ್ಕೆ ನಮ್ಮ ಬೆಂಬಲವೂ ಕೂಡ ಇದೆ, ಆದರೆ ಬೇಜವಾಬ್ದಾರಿಯಿಂದ ಕೆಲ ಗೂಂಡಾಗಿಯಂತೆ ವರ್ತಿಸಿ ವಿಶ್ವವಿದ್ಯಾನಿಲಯದ ಸೊತ್ತಿಗೆ ಹಾನಿ ಮಾಡಿರುವುದು ಖಂಡನೀಯ.
ಈ ಘಟನೆಗೆ ಸಂಬಂಧಿಸಿ ‌ಮಂಗಳೂರು‌ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆಯಲ್ಲಿ ತೀವ್ರವಾಗಿ ಖಂಡಿಸಿ ಹಾನಿ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಸವಾದ್ ಸುಳ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು