ಇತ್ತೀಚಿನ ಸುದ್ದಿ
ಅಂಕೋಲಾ: ಹೆದ್ದಾರಿ ಮೇಲೆ ಗುಡ್ಡ ಕುಸಿತ; 7 ಮಂದಿ ಸಾವು; ನದಿಯಲ್ಲಿ ಕೊಚ್ಚಿ ಹೋದ ಗ್ಯಾಸ್ ಟ್ಯಾಂಕರ್
16/07/2024, 19:55
ಕಾರವಾರ(reporterkarnataka.com): ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಗುಡ್ಡ ಕುಸಿತ ಘಟನೆಯಲ್ಲಿ 9 ಮಂದಿ ನಾಪತ್ತೆಯಾಗಿದ್ದರು. ಇದೀಗ ಅವರಲ್ಲಿ 7 ಜನ ಸಾವನ್ನಪ್ಪಿದ್ದಾರೆ.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಜಿಲ್ಲಾಧಿಕಾರಿ ನೀಡಿರುವ ಮಾಹಿತಿ ಪ್ರಕಾರ ಗುಡ್ಡ ಕುಸಿತದಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ ಮಣ್ಣುತೆರವು ಕಾರ್ಯಾಚರಣೆ ಚುರುಕುಗೊಂಡಿದೆ ಎಂದು ತಿಳಿಸಿದ್ದಾರೆ.
ಹೆದ್ದಾರಿ ಮೇಲೆ ಗುಡ್ಡ ಕುಸಿತದ ವೇಳೆ ಗ್ಯಾಸ್ ಟ್ಯಾಂಕರ್ ಒಂದು ನದಿಗೆ ಬಿದ್ದಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದೆ.