8:15 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು!: ಬಡವರ ಕೂಳಿಗೂ ಆಗಾಗ ಕನ್ನ: 2050 ಕೆಜಿ ಅಕ್ರಮ ಪಡಿತರ ವಶ

05/08/2022, 20:32

ಕುಂದಾಪುರ(reporterkarnataka.com):  ಬಡವರಿಗೆ ಸರಕಾರ ನೀಡುವ ಅನ್ನಭಾಗ್ಯದ ಅಕ್ಕಿಯನ್ನು ಆಗಾಗ ಅಕ್ರಮ ಸಾಗಾಟ ಮಾಡಿದ ವಿಷಯವನ್ನು ನಾವು ಆಗಾಗ ಕೇಳುತ್ತಿರುತ್ತೇವೆ. ಇದೀಗ ಕುಂದಾಪುರ ತಾಲೂಕಿನಲ್ಲಿ ಇಂತಹದ್ದೊಂದು ಅಕ್ರಮ ದಾಸ್ತಾನು ಬೆಳಕಿಗೆ ಬಂದಿದೆ. ಇಲ್ಲಿನ ತಲ್ಲೂರು ನೇರಳಕಟ್ಟೆಯ ಮನೆಯೊಂದಕ್ಕೆ ಕುಂದಾಪುರ ಆಹಾರ ನಿರೀಕ್ಷಕರು ಪೊಲೀಸರೊಂದಿಗೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 45100 ರೂ. ಮೌಲ್ಯದ 2050 ಕೆ.ಜಿ ತೂಕದ ಉಚಿತ ಅನ್ನ ಭಾಗ್ಯ ಯೋಜನೆ ಅಕ್ಕಿಯನ್ನು ವಶಪಡಿಸಿಕೊಂಡಿಸಿದ್ದಾರೆ.

ತಲ್ಲೂರು ನೇರಳಕಟ್ಟೆಯ ನಿವಾಸಿ ಅಬ್ದುಲ್ ಮುನಾಫ್ ಎಂಬಾತ ಉಚಿತ ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಲು ದಾಸ್ತಾನು ಇರಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಹಾಗೂ ಪೊಲೀಸರು ಆ.4ರಂದು ದಾಳಿ ನಡೆಸಿದ್ದಾರೆ.

ಆರೋಪಿ ಅಬ್ದುಲ್ ಮುನಾಫ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆತ ಸರಕಾರದಿಂದ ಜನರಿಗೆ ದೊರೆಯುವ ಉಚಿತ ಅನ್ನಭಾಗ್ಯದ ಅಕ್ಕಿಯನ್ನು ಯಾರಿಂದಲೋ ಪಡೆದು, ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ದಾಸ್ತಾನು ಇರಿಸಿರುವುದಾಗಿ ಒಪ್ಪಿಕೊಂಡಿದ್ದಾನೆ‌ ಈ ಸಂದರ್ಭದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ 45100 ರೂ. ಮೌಲ್ಯದ 2050 ಕೆ.ಜಿ ತೂಕದ ಉಚಿತ ಅನ್ನ ಭಾಗ್ಯ ಯೋಜನೆ ಅಕ್ಕಿ ಹಾಗೂ 80 ಮೌಲ್ಯದ ಆಟೋ ರಿಕ್ಷಾ, 3 ಸಾವಿರ ಮೌಲ್ಯದ ತೂಕದ ಯಂತ್ರ, 300 ರೂ. ಗೋಣಿ ಚೀಲ, 150 ರೂ. ಪ್ಲಾಸ್ಟಿಕ್ ಚೀಲ ಮೊದಲಾದ ಸೊತ್ತುಗಳನ್ನು ಸ್ವಾದೀನಪಡಿಸಿಕೊಳ್ಳಲಾಗಿದೆ‌. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು