4:23 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ

01/06/2026, 15:43

ಚೆನ್ನೈ(reporterkarnataka.com): ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಬಿಜೆಪಿ ತೊರೆದು ‘ಹೊಸ ಆಂದೋಲನ’ ಆರಂಭಿಸಲಿದ್ದಾರೆ ಎಂಬ ವರದಿಗಳು ಸಂಚಲನ ಸೃಷ್ಟಿಸಿವೆ. ಈಗಾಗಲೇ ‘ನಾವು ನಾಯಕರು’ ಎಂಬ ಸಂಘಟನೆ ಹೊಂದಿರುವ ಅವರು, ತಮ್ಮದೇ ಆದ ರಾಜಕೀಯ ಹಾದಿ ಹಿಡಿಯುವ ಸಾಧ್ಯತೆಗಳಿವೆ. ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಬಿಜೆಪಿ ತೊರೆದು ರಾಜ್ಯದಲ್ಲಿ ‘ಹೊಸ ಆಂದೋಲನ’ ಆರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟೀವಿ ವರದಿ ಮಾಡಿದೆ. ತಮಿಳುನಾಡು ವಿಧಾನಸಭಾ ಚುನಾವಣೆ ಬಳಿಕ ಈ ಸುದ್ದಿ ಸಂಚಲನ ಸೃಷ್ಟಿಸಿದೆ.
ಅಣ್ಣಾಮಲೈ ಈಗಾಗಲೇ ಲಾಭರಹಿತ ‘ನಾವು ನಾಯಕರು’ ಎಂಬ ಸಂಘಟನೆಯನ್ನು ಹೊಂದಿದ್ದಾರೆ. ಮುಂದಿನ 6 ತಿಂಗಳವರೆಗೆ ರಾಜಕೀಯ ಪಕ್ಷವನ್ನು ಪ್ರಾರಂಭಿಸುವ ಯಾವುದೇ ಯೋಜನೆ ಇಲ್ಲ. ಆದರೆ ಸಮಾನ ಮನಸ್ಕ ಜನರನ್ನು ಸೇರಿಸಿಕೊಳ್ಳುವುದು, ಬಲವಾದ ಸ್ವಯಂಸೇವಕ ನೆಲೆಯನ್ನು ನಿರ್ಮಿಸುವುದು ಮತ್ತು ಅವರನ್ನು ರಾಜಕೀಯವಾಗಿ ಬೆಳೆಸುವುದು ಅವರ ಗುರಿಯಾಗಿದೆ ಎಂದು ಮೂಲಗಳು ತಿಳಿಸಿವೆ, ಆದಾಗ್ಯೂ ಪ್ರಧಾನಿ ನರೇಂದ್ರ ಮೋದಿ ಅಣ್ಣಾಮಲೈ ಅವರಿಗೆ ಸ್ಫೂರ್ತಿಯಾಗಿ ಮುಂದುವರೆದಿದ್ದಾರೆ ಎಂದು ಅವು ತಿಳಿಸಿವೆ.
ಇತ್ತೀಚೆಗೆ ಸಿಬಿಎಸ್‌ಇ ತ್ರಿಭಾಷಾ ನೀತಿ ಸೇರಿ ಕೇಂದ್ರ ಸರ್ಕಾರದ ನಿಲುವನ್ನು ಅಣ್ಣಾಮಲೈ ವಿರೋಧಿಸಿದ್ದರು. ಅಲ್ಲದೆ, ತಮಿಳ್ನಾಡು ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದರು. ಆಗಿಂದಲೇ ಅವರ ಮುಂದಿನ ನಿಲುವು ಏನು ಎಂಬ ಪ್ರಶ್ನೆ ಉದ್ಭವಿಸಿದ್ದವು. ಬಿಜೆಪಿಯಲ್ಲಿ ಅಣ್ಣಾಮಲೈ ಅವರನ್ನು ಕಡಗಣನೆ ಮಾಡಲಾಗ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈಗ ತಮ್ಮ ಹೊಸ ಆಂದೋಲನದ ಮೂಲಕ ಬಿಜೆಪಿಗೆ ಶಾಕ್ ಕೊಡಲು ಅಣ್ಣಾಮಲೈ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನ ಸಿಎಂ ವಿಜಯ್, ಎರಡು ವರ್ಷದ ಹಿಂದೆಯಷ್ಟೇ ಹೊಸ ಪಕ್ಷ ರಚನೆ ಮಾಡಿದ್ದರು. ಎರಡು ವರ್ಷ ಪ್ರಚಾರ ನಡೆಸಿ ಸರ್ಕಾರ ರಚನೆ ಮಾಡುವಲ್ಲಿ ಸಕ್ಸಸ್ ಆಗಿದ್ದಾರೆ. ಇದೀಗ ಅದೇ ರೀತಿ ಅಣ್ಣಾಮಲೈ ಮುಂದಾದ್ರಾ ಎಂಬ ಚರ್ಚೆಗಳು ತಮಿಳುನಾಡು ರಾಜಕೀಯ ವಲಯದಲ್ಲಿ ಶುರುವಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು