2:38 PM Sunday1 - November 2026
ಬ್ರೇಕಿಂಗ್ ನ್ಯೂಸ್
ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ರಾಜ್ಯದಲ್ಲಿ 5 ದಿನಗಳು ಮಳೆ ಸಾಧ್ಯತೆ

01/11/2026, 14:38

ಬೆಂಗಳೂರು(repprterkarnataka.com):ಅರ್ನಾಬ್‌ ಚಂಡಮಾರುತದ ಬೆನ್ನಲ್ಲೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮತ್ತೆ ಮತ್ತೊಂದು ಸುತ್ತಿನ ಮಳೆಯಾಗುವ ಮುನ್ಸೂಚನೆಗಳಿವೆ. ಇಂದಿನಿಂದ ಐದು ದಿನಗಳ ಕಾಲ ರಾಜ್ಯದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಗಳನ್ನು ನೀಡಿದೆ. ಈ ವಾಯುಭಾರ ಕುಸಿತವೂ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಗಳಿವೆ. ಇದರಿಂದ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ರಾಜ್ಯದ ಪೂರ್ವ ಭಾಗದ ಜಿಲ್ಲೆಗಳ ಹಲವೆಡೆ ಹೆಚ್ಚಿನ ಮಳೆಯಾಗುವ ಮುನ್ಸೂಚನೆಗಳಿವೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಪರಿಣಾಮ ಇತ್ತೀಚೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆಯಾಗಿತ್ತು. ಅಲ್ಲದೆ, ಅದು ತೀವ್ರ ಚಂಡ ಮಾರುತವಾಗಿ ಪರಿವರ್ತನೆಯಾದ ಹಿನ್ನೆಲೆಯಲ್ಲಿ ವಾತಾವರಣದಲ್ಲಿದ್ದ ತೇವಾಂಶವನ್ನು ಸೆಳೆದುಕೊಂಡಿತ್ತು. ಇದರಿಂದ ರಾಜ್ಯದಲ್ಲಿ ಒಂದು ವಾರದಿಂದ ಮಳೆ ಪ್ರಮಾಣ ಕ್ಷೀಣಿಸಿತ್ತು. ಒಣಹವೆ ಮುಂದುವರೆದು ಚಳಿಯ ವಾತಾವರಣ ಕಂಡುಬಂದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು