ಇತ್ತೀಚಿನ ಸುದ್ದಿ
ವಿರಾಜಪೇಟೆಯಲ್ಲಿ 10 ಲಕ್ಷ ವೆಚ್ಚದಲ್ಲಿ ಮತ್ತೊಂದು ಕುಡಿಯುವ ನೀರು ಘಟಕ: ಶಾಸಕರಿಂದ ಭೂಮಿ ಪೂಜೆ
08/07/2025, 13:08

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ವಿರಾಜಪೇಟೆ ನಗರದ ಒಂದನೇ ವಾರ್ಡಿನ ಶಾಂತ ಚಿತ್ರಮಂದಿರ ಬಳಿ, ನಿರ್ಮಿತಿ ಕೇಂದ್ರದ ಮೂಲಕ ₹ 10 ಲಕ್ಷದಲ್ಲಿ, ಮಾನ್ಯ ಶಾಸಕರ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೂಮಿ ಪೂಜೆ ನೆರವೇರಿಸಿದರು.ವಿರಾಜಪೇಟೆ ನಗರವು ಪ್ರಗತಿಯಲ್ಲಿ ವಿಸ್ತೀರ್ಣ ಗೊಳ್ಳುತ್ತಿದ್ದು ಜನಸಾಮಾನ್ಯರಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮಾನ್ಯ ಶಾಸಕರು ಕುಡಿಯುವ ನೀರು ಘಟಕಕ್ಕೆ ಮಂಜೂರಾತಿ ನೀಡಿದ್ದರು. ಇಂದು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮಾನ್ಯ ಶಾಸಕರು ಶುದ್ಧ ಕುಡಿಯುವ ನೀರು ಪ್ರತಿಯೊಬ್ಬನ ಅವಶ್ಯಕತೆಯಾಗಿದ್ದು ಜನರು ಸಹ ಮಿತವಾಗಿ ನೀರನ್ನು ಬಳಸಿ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಮಾಚಯ್ಯ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಸದಸ್ಯರು, ಹಿರಿಯ ಕಾಂಗ್ರೆಸ್ ಮುಖಂಡರು, ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.