2:44 PM Sunday8 - November 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ…

ಇತ್ತೀಚಿನ ಸುದ್ದಿ

ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ ಕೂಡ ಏರಿಕೆ

08/11/2026, 14:43

*ಕೆಎಸ್ಸಾರ್ಟಿಸಿ ದರ ಏರಿಕೆ ಬೆನ್ನಲ್ಲೇ ಕೊಡಗಿನಲ್ಲೂ ಖಾಸಗಿ ಬಸ್ ದರ ಏರಿಕೆ*

*10 ರಿಂದ 20 ಶೇಕಡಾವಾರು ದರ ಏರಿಕೆ*

*ನವೆಂಬರ್ 11 ರಿಂದ ಜಾರಿ*

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

2018ರಿಂದ ಇಲ್ಲಿಯವರೆಗೆ ಸ್ಥಿರವಾಗಿದ್ದ ಕೊಡಗು ಜಿಲ್ಲೆಯ ಖಾಸಗಿ ಬಸ್‌ ಪ್ರಯಾಣ ದರ ಇದೀಗ ಏರಿಕೆಯಾಗಲಿದೆ.
ನವೆಂಬರ್ 11ರಿಂದ ದರ ಶೇ. 10ರಿಂದ 20ರಷ್ಟು ಹೆಚ್ಚಾಗಲಿದೆ ಎಂದು ಕೊಡಗು ಬಸ್ ಮಾಲೀಕರ ಸಂಘದ ಅಧ್ಯಕ್ಷ ಜನಾರ್ಧನ್ ಪ್ರಭು ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿ ದರದ ಏರಿಕೆ ಈಗಾಗಲೇ ಶೇ. 23ರಷ್ಟು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಅವರು ಹೇಳಿದರು.
ಕೋವಿಡ್‌ಗೂ ಮೊದಲು ಜಿಲ್ಲೆಯಲ್ಲಿ 160ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಓಡಾಡುತ್ತಿದ್ದವು. ನಂತರ 50 ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದೆ. ಈಗ ಕೇವಲ 110 ಬಸ್‌ಗಳು ಮಾತ್ರ ಸಂಚರಿಸುತ್ತಿವೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು