7:12 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಹೋಟೆಲ್ ಉದ್ಯಮಕ್ಕೆ ಸರ್ಕಾರದಿಂದ ಮತ್ತೆ ಶಾಕ್: 10 ದಿನ ಗ್ಯಾಸ್ ಪೂರೈಕೆ ಕಷ್ಟ ಎಂದ ಸಚಿವ ಮುನಿಯಪ್ಪ

16/03/2026, 18:04

ಬೆಂಗಳೂರು(reporterkarnataka.com): ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಅಭಾವದ ಬಿಸಿ ಇದೀಗ ಹೋಟೆಲ್ ಉದ್ಯಮಕ್ಕೆ ತಟ್ಟಿದೆ. ಹೋಟೆಲ್‌ಗಳಿಗೆ ಸದ್ಯಕ್ಕೆ ವಾಣಿಜ್ಯ ಬಳಕೆಯ ಗ್ಯಾಸ್ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ತೈಲ ಪೂರೈಕೆ ಕಂಪನಿಗಳ ಮುಖ್ಯಸ್ಥರೊಂದಿಗೆ ನಡೆಸಿದ ಮಹತ್ವದ ಸಭೆಯ ನಂತರ ಮಾತನಾಡಿದ ಅವರು, ಪರಿಸ್ಥಿತಿ ಗಂಭೀರವಾಗಿದ್ದು ಮುಂದಿನ ಒಂದು ವಾರದಿಂದ 10 ದಿನಗಳವರೆಗೆ ಹೋಟೆಲ್‌ಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.

*ಸುದ್ದಿಯ ಮುಖ್ಯಾಂಶಗಳು:*

ಆದ್ಯತಾ ವಲಯಕ್ಕೆ ಪೂರೈಕೆ: ಸದ್ಯ ಲಭ್ಯವಿರುವ ಅನಿಲ ದಾಸ್ತಾನನ್ನು ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು (ಹಾಸ್ಟೆಲ್‌ಗಳು), ಇಂದಿರಾ ಕ್ಯಾಂಟೀನ್, ರೈಲ್ವೆ ಕ್ಯಾಂಟೀನ್ ಮತ್ತು ಏರ್‌ಲೈನ್ಸ್‌ಗಳಿಗೆ ಆದ್ಯತೆಯ ಮೇಲೆ ಪೂರೈಸಲು ನಿರ್ಧರಿಸಲಾಗಿದೆ.
ಎಲೆಕ್ಟ್ರಿಕ್ ಸ್ಟವ್ ಬಳಕೆಗೆ ಮನವಿ: ವಾಣಿಜ್ಯ ಸಿಲಿಂಡರ್ ಅಭಾವವಿರುವುದರಿಂದ ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಎಲೆಕ್ಟ್ರಿಕ್ ಅಥವಾ ಇಂಡಕ್ಷನ್ ಸ್ಟವ್‌ಗಳನ್ನು ಬಳಸುವ ಮೂಲಕ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದ್ದಾರೆ.

*ಗೃಹಬಳಕೆ ಅನಿಲ ಸುರಕ್ಷಿತ:*

ಮನೆಗಳಿಗೆ ನೀಡಲಾಗುವ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಪ್ರತಿ ಕುಟುಂಬಕ್ಕೆ 25 ರಿಂದ 30 ದಿನಕ್ಕೊಮ್ಮೆ ಒಂದು ಸಿಲಿಂಡರ್ ಸಿಗುವಂತೆ ಕ್ರಮ ವಹಿಸಲಾಗಿದೆ. ಗ್ರಾಹಕರು ವಿನಾಕಾರಣ ಆತಂಕಗೊಂಡು ಡಬಲ್ ಬುಕ್ಕಿಂಗ್ ಮಾಡಬಾರದು ಎಂದು ಸಚಿವರು ತಿಳಿಸಿದ್ದಾರೆ.
ಆಟೋ ಎಲ್‌ಪಿಜಿ ಸುಗಮ: ಆಟೋರಿಕ್ಷಾಗಳಿಗೆ ಬೇಕಾಗುವ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ತೈಲ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

*ಕಾಳಸಂತೆಕೋರರಿಗೆ ಎಚ್ಚರಿಕೆ*
ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡು ವಾಣಿಜ್ಯ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ವಸ್ತುಗಳ ಕಾಯ್ದೆಯಡಿ ಅಂತಹ ಏಜೆನ್ಸಿಗಳ ಮೇಲೆ ದಾಳಿ ನಡೆಸಿ ಸೀಜ್ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು