8:18 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

18/03/2026, 18:55

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ವಿದ್ಯುತ್ ಸ್ಪರ್ಶದಿಂದ ಸುಮಾರು 2ರಿಂದ 3 ವರ್ಷದ ಹುಲಿಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯದ ಬಫ‌ರ್ ಜೋನ್ ವಲಯ ವ್ಯಾಪ್ತಿಯ ಪಡಗೂರು ಗ್ರಾಮದಲ್ಲಿ ನಡೆದಿದೆ.

ಪಡಗೂರಿನ ಅಡವಿ ಮಠದ ಸಮೀಪದ ಜಮೀನಿನಲ್ಲಿ ಬಾಳೆ ಬೆಳೆ ಕಾವಲಿಗೆ ಹಾಕಲಾಗಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 2ರಿಂದ 3 ವಯಸ್ಸಿನ ಹೆಣ್ಣು ಹುಲಿಯೊಂದು ಮೃತಪಟ್ಟಿದೆ.
ಪಡಗೂರು ಗ್ರಾಮದ‌ ಸುತ್ತಮುತ್ತಲೂ ಹುಲಿ ‌ಓಡಾಟ ಹೆಚ್ಚಳವಾಗಿದ್ದು‌, ಕಳೆದ ವಾರ ಪಡಗೂರಿನ‌ ರೈತರೊಬ್ಬರ ಜಾನುವಾರು ‌ಮೇಲೆ ಹುಲಿ ದಾಳಿ ನಡೆಸಿ‌ ಕೊಂದು ‌ಹಾಕಿತ್ತು. ಹುಲಿ ಸೆರೆಗೆ ಅರಣ್ಯ ಇಲಾಖೆಯ ಅಧಿಕಾರಗಳು ಬೋನ್ ಅಳವಡಿಸಿ ನಿಗಾ ವಹಿಸಿದ್ದರು. ಹುಲಿ ಸೆರೆ ಸಂಬಂಧ ಬಫರ್ ವಲಯದ ಅರಣ್ಯಾಧಿಕಾರಿಗಳು ಥರ್ಮಲ್ ಡ್ರೋನ್ ಹಾರಿಸುವಾಗ ವಿದ್ಯುತ್ ಸ್ಪರ್ಶದಿಂದ ಹುಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಮಾಹಿತಿ ಅರಿತ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಎ.ಸಿ.ಎಫ್ ಸುರೇಶ್,ಡಿ.ಆರ್.ಎಫ್.ಓ.ಶಿವಕುಮಾರ್, ಸೇರಿದಂತೆ ಅರಣ್ಯಾಧಿಕಾರಿಗಳ‌ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು