9:27 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್

29/06/2025, 18:06

ಬೆಂಗಳೂರು(reporterkarnataka.com): ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು.
ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, “ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ” ಎಂದು ಹೇಳಿದರು.

*ಆಶೋಕ್ ಬಳಿ ನಾನು ಹೋಗಿ ಭವಿಷ್ಯ ಕೇಳುವೆ:*
ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ” ಎಂದು ಛೇಡಿಸಿದರು.
ಸುರ್ಜೆವಾಲ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡುವರೇ ಎಂದು ಕೇಳಿದಾಗ, “ಹೌದು, ಅವರು ಶಾಸಕರ ಜೊತೆ ಖುದ್ದಾಗಿ ಭೇಟಿ ಮಾಡಲಿದ್ದಾರೆ. ಈ ಬಗ್ಗೆ ಅವರೇ ಶಾಸಕರಿಗೆ ತಿಳಿಸಿದ್ದಾರೆ. ನಾನು ಕೂಡ ಶಾಸಕರಿಗೆ ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು