4:07 AM Thursday19 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ: ಸೆ.15ರಂದು ಬೃಹತ್ ಮಾನವ ಸರಪಳಿ

10/09/2024, 22:19

ಮಂಗಳೂರು(reporterkarnataka.com): ಸೆಪ್ಟೆಂಬರ್ 15ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಸೂಚನೆ ನೀಡಿದರು.
ಅವರು ಮಂಗಳವಾರ ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಈಗಾಗಲೇ ಸೂಚಿಸಿರುವಂತೆ ಮಾನವ ಸರಪಳಿ ಕಾರ್ಯಕ್ರಮವನ್ನು ರಚಿಸಲು ಅಂತಿಮ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಮಾನವ ಸರಪಳಿ ರಚನೆ ಕುರಿತಂತೆ ಸಂಬಂಧಪಟ್ಟ ವ್ಯಾಪ್ತಿಯ ತಹಸೀಲ್ದಾರ್‍ ಗಳು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ಪಿಡಿಓಗಳು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.
ಎಲ್ಲಾ ಜನಪ್ರತಿನಿಧಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಸ್ವ ಸಹಾಯ ಸಂಘಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಪ್ರತಿಯೊಬ್ಬರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮ ಆಚರಣೆ ಆಗುವಂತೆ ನೋಡಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರಿಂದ ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜಿಸುವಂತೆ ತಿಳಿಸಿದರು.
ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ವತಿಯಿಂದ ಅಗತ್ಯ ಭದ್ರತೆ ಒದಗಿಸುವಂತೆ ತಿಳಿಸಿದ ಉಪವಿಭಾಗಾಧಿಕಾರಿಗಳು, ಆರೋಗ್ಯ ಇಲಾಖೆಯ ಮೂಲಕ ಆರೋಗ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ಕುರಿತಂತೆ, ಈ ಕಾರ್ಯಕ್ರಮದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಅವರು ತಿಳಿಸಿದರು.
ಸಭೆಯಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಸಹಾಯಕ ಪೊಲೀಸ್ ಆಯುಕ್ತೆ ನಝ್ಮಾ ಫಾರೂಖಿ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು