ಇತ್ತೀಚಿನ ಸುದ್ದಿ
ಪಕ್ಷ ವಿರೋಧಿ ಚಟುವಟಿಕೆ: ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಜೆಪಿ ಗೇಟ್ ಪಾಸ್
27/05/2025, 15:17

ಬೆಂಗಳೂರು(reporterkarnataka.com):ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಉಚ್ಚಾಟಿಸಲಾಗಿದೆ.
ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಇಬ್ಬರು ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಉಚ್ಚಾಟನೆ ಕ್ರಮ ಕೈಗೊಂಡಿದೆ. 6 ವರ್ಷಗಳ ಕಾಲ ಇವರನ್ನು ಪಕ್ಷದಿಂದ ಹೊರಹಾಕಲಾಗಿದೆ.