1:40 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅನುಮಾನಾಸ್ಪದವಾಗಿ ಅಪ್ರಾಪ್ತ ಬಾಲಕಿ ಸಾವು: ತನಿಖೆ ನಡೆಸುವಂತೆ ಬಣಕಲ್ ಠಾಣೆಗೆ ಸಂಬಂಧಿಕರ ದೂರು

12/02/2022, 08:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಮೃತಪಟ್ಟಿದ್ದು, ಸಾವು ಅನುಮಾನಸ್ಪದವಾಗಿದೆ ಎಂದು ಯುವತಿಯ ಸಂಬಂಧಿಕರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ.

ಬಣಕಲ್ ಠಾಣಾ ವ್ಯಾಪ್ತಿಯ ಹೆಬ್ರಿಗೆ ಗ್ರಾಮದಲ್ಲಿ ಘಟನೆ  ನಡೆದಿದ್ದು ಕೆ.ಆರ್. ದೀಕ್ಷಾ (17) ಮೃತಪಟ್ಟ ಯುವತಿ. ಸಕಲೇಶಪುರ ತಾಲ್ಲೂಕಿನ ಕೊಗರಹಳ್ಳಿ ಮೂಲದ ದೀಕ್ಷಾ ಬಣಕಲ್ ಸಮೀಪದ ಹೆಬ್ರಿಗೆ ಗ್ರಾಮದ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಚಿಕ್ಕಮಗಳೂರಿನ ಕಾಲೇಜಿಗೆ ಹೋಗುತ್ತಿದ್ದಳು. ಶುಕ್ರವಾರ ಕಾಲೇಜಿಗೆ ರಜೆ ಇದ್ದುದ್ದರಿಂದ ದೀಕ್ಷಾ ಮನೆಯಲ್ಲಿ ಇದ್ದಳು. ಶುಕ್ರವಾರ ಮನೆಯವರು ಮನೆಗೆ ಬಂದು ನೋಡಿದಾಗ ದೀಕ್ಷಾ ಮೃತದೇಹ ನೇಣು ಬಿಗಿದ  ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಮೃತಳ ಸಂಬಂಧಿಕರಾದ ಅಣ್ಣಪ್ಪ ಬಣಕಲ್ ಠಾಣೆಗೆ ದೂರು ನೀಡಿದ್ದು ದೀಕ್ಷಾ ಸಾವಿನ ಬಗ್ಗೆ ಅನುಮಾನಗಳಿದ್ದು ತನಿಖೆ ನಡೆಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. 

ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು