5:59 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ: ಹಸೆಮಣೆ ಏರಲಿರುವ ಅನುಶ್ರೀ- ರೋಷನ್ ಜೋಡಿ

26/08/2025, 23:06

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಆ್ಯಂಕರ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಅನುಶ್ರೀ ಅವರು ಆ. 28ರಂದು ಹಸೆಮಣೆ ಏರಲಿದ್ದಾರೆ.
ಅವರು ಬೆಂಗಳೂರು ಹೊರ ವಲಯದಲ್ಲಿರುವ ಕಗ್ಗಲಿಪುರದ ಬೈ ಸ್ಪಾನ್​ಲೈನ್ಸ್ ಸ್ಟುಡಿಯೋಸ್​ನಲ್ಲಿ ಕೊಡಗು ಜಿಲ್ಲೆ ಸುಂಟಿಕೊಪ್ಪ ಮೂಲದ ರೋಷನ್ ಅವರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ.
ಇತ್ತೀಚಿಗೆ ಅನುಶ್ರೀ ಅವರ ಲಗ್ನ ಪತ್ರಿಕೆ ವೈರಲ್ ಆಗಿದ್ದು, ‘ನೀವೆಲ್ಲ ಕೇಳುತ್ತಿದ್ದ ಪ್ರಶ್ನೆಗೆ ಈಗ ಉತ್ತರ, ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ’ ಎಂದು ಲಗ್ನ ಪತ್ರಿಕೆಯಲ್ಲಿ ಅನುಶ್ರೀ ಛಾಪಿಸಿದ್ದಾರೆ.
ಅನುಶ್ರೀ ಹಾಗೂ ರೋಷನ್ ಅವರದ್ದು ಪ್ರೇಮ ವಿವಾಹ ಎಂದು ಹೇಳಲಾಗಿದೆ. ಈ ಜೋಡಿ ಮೊದಲು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮನೆಯಲ್ಲಿ ಭೇಟಿಯಾಗಿ ತದನಂತರ ಪರಿಚಯ ಬೆಳೆದು, ಪ್ರೇಮಾಂಕುರಗೊಂಡಿತ್ತು. ಈಗ ಪರಸ್ಪರ ಮನೆಯವರ ಒಪ್ಪಿಗೆಯೊಂದಿಗೆ ಬಾಳ ಸಂಗಾತಿಗಳಾಗುತ್ತಿದ್ದಾರೆ.
ಅನುಶ್ರೀ ಅವರ ಭಾವಿ ಪತಿ ರೋಷನ್ ಮೂಲತಃ ಕೊಡಗು ಜಿಲ್ಲೆ ಸುಂಟಿಕೊಪ್ಪ ಮೂಲದವರು. ಈ ಹಿಂದೆ ಸುಂಟಿಕೊಪ್ಪದಲ್ಲಿ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ರಾಮಮೂರ್ತಿ ಮತ್ತು ಸಿಸಿಲಿಯ ದಂಪತಿಯ ಪುತ್ರ. ಇವರು ಜನಿಸಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಣ ಪಡೆದಿದ್ದು ಸುಂಟಿಕೊಪ್ಪದಲ್ಲಿ. ದಶಕದ ಹಿಂದೆ ಇವರ ತಂದೆ ತಾಯಿ ಸುಂಟಿಕೊಪ್ಪ ತೊರೆದು ಪ್ರಸ್ತುತ ಕುಶಾಲನಗರದಲ್ಲಿ ನೆಲೆಸಿದ್ದಾರೆ. ಉನ್ನತ ಶಿಕ್ಷಣ ಪಡೆದು ರೋಷನ್ ಬೆಂಗಳೂರಿನಲ್ಲಿ ತಮ್ಮದೇ ಆದ ಉದ್ಯಮವನ್ನು ಆರಂಭಿಸಿದ್ದರು.
ಆ. 28ರಂದು ಅನುಶ್ರೀ ಮತ್ತು ರೋಷನ್ ಜೋಡಿ ತಮ್ಮ ಆಪ್ತರು, ಕುಟುಂಬದವರು ಹಾಗೂ ಗೆಳೆಯರ ಸಮ್ಮುಖದಲ್ಲಿ ಹಸೆಮಣೆ ಏರಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು