ಇತ್ತೀಚಿನ ಸುದ್ದಿ
ಅಪಘಾತದಲ್ಲಿ ಗಾಯಗೊಂಡು ರಸ್ತೆಗೆ ಬಿದ್ದಿದ್ದ ದ್ವಿಚಕ್ರ ವಾಹನ ಸವಾರರ ಆಸ್ಪತ್ರೆಗೆ ದಾಖಲಿಸಿದ ಪ್ರತಿಪಕ್ಷ ಉಪ ನಾಯಕ ಖಾದರ್
22/07/2022, 12:39

ಮಂಗಳೂರು(reporterkarnataka.com): ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರು ಕಾರ್ಯಕ್ರಮದ ನಿಮಿತ್ತ ಉಡುಪಿ ತೆರಳುತ್ತಿದ್ದಾಗ ದಾರಿಯಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡವರನ್ನು ತನ್ನದೇ ಕಾರಿನಲ್ಲಿ ಸಕಾಲದಲ್ಲಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ನಗರದ ಕೆಪಿಟಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಹಾಗೂ ಆಲ್ಟೋ ಕಾರು ಮಧ್ಯೆ ಅಪಘಾತ ಸಂಭವಿಸಿತ್ತು. ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಸವಾರರನ್ನು ಸಮೀಪದ ಎ.ಜೆ.ಶೆಟ್ಟಿ ಆಸ್ಪತ್ರೆಗೆ ಖಾದರ್ ಸೇರಿಸಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಮಹಿಳೆ ಹಾಗೂ ಓರ್ವ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.