8:30 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಅಪಘಾತ ಸಂಭವಿಸಿದ ಕಾರಿನಲ್ಲಿ ನಾನು ಇರಲಿಲ್ಲ: ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸ್ಪಷ್ಟನೆ

06/07/2021, 20:13

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಅವರ ಕಾರು ಅಪಘಾತ ಸಂಭವಿಸಿದ್ದು, ತಾನು ಆ ಕಾರಿನಲ್ಲಿ ಇರಲಿಲ್ಲ ಎಂದು ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ.

ಅಥಣಿ ಪಟ್ಟಣದ  ಸ್ವಗೃಹದಲ್ಲಿ ರಿಪೋರ್ಟರ್ಸ್ ಕರ್ನಾಟಕ  ಜತೆ ಮಾತನಾಡಿದ ಅವರು, 

ನಾನು ಮತ್ತು ನಮ್ಮ ಸ್ನೇಹಿತರು ಅಂಜನಾದ್ರಿ ಬೆಟ್ಟದ ಹನುಮನ ದರ್ಶನಕ್ಕೆ ಹೋಗಿದ್ದೀವಿ. ಮರಳಿ ಊರಿಗೆ ಬರುವ ಸಂದರ್ಭದಲ್ಲಿ ಹುನಗುಂದ ಸಮೀಪದಲ್ಲಿ ಈ ಘಟನೆ ಸಂಭವಿಸಿದೆ. ನಾವು ಮತ್ತು ನಮ್ಮ ಸ್ನೇಹಿತರು ಎರಡು ಕಾರುಗಳಲ್ಲಿ ಹೋಗಿದ್ದು, ಹಿಂದಿನ ಕಾರಿನಿಂದ ನಮ್ಮ ಚಾಲಕ ಅಪಘಾತಕ್ಕೆ ಒಳಗಾಗಿ ನಮಗೆ ಕರೆ ಮಾಡಿದ ತಿಳಿಸಿದ. ನಾನು ತಕ್ಷಣವೇ ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. 

ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಹೋರಡುತ್ತೇನೆ. ನಮ್ಮ ಕಡೆಯಿಂದ ಆದಷ್ಟು ಪರಿಹಾರ ನೀಡುತ್ತೇನೆ. ಯಾವುದೇ ರೀತಿಯ ತಮ್ಮ ತಂದೆಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ, ನಾನು ಯಾರ ಮುಂದೆಯೂ ಡಿಸಿಎಂ ಮಗನೆಂದು ಹೇಳಿಲ್ಲ ಎಂದು ಆರೋಪಕ್ಕೆ ತೆರೆ ಎಳೆದರು. 

ಸದ್ಯ ಈ ಪ್ರಕರಣ ಹುನಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ ಅವರು, ಈ ಪ್ರಕರಣದ ಬಗ್ಗೆ ನಮ್ಮ ತಂದೆಯವರಾದ ಲಕ್ಷಣ ಸವದಿ ಅವರಿಗೆ ಮಾಹಿತಿ ನೀಡಿದ್ದೆನೆ ಎಂದು ಚಿದಾನಂದ ಸವದಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು