2:55 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನ ಆಂತರಿಕ ಕ್ಷೋಭೆ: ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅತಂತ್ರರಾದ ಬಂಟ್ವಾಳದ ಧರ್ಮಗುರು

19/08/2021, 14:27

ಮಂಗಳೂರು (reporterkarnataka.com): ತಾಲಿಬಾನ್ ಕೈವಶವಾಗಿರುವ ಅಫ್ಘಾನಿಸ್ತಾನದ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಮೂಲದ ಧರ್ಮಗುರುವೊಬ್ಬರು ಅತಂತ್ರ ಸ್ಥಿತಿಯಲ್ಲಿ ಸಿಲುಕಿರುವ ಬಗ್ಗೆ ವರದಿಯಾಗಿದೆ.

ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಕಲ್ಕುರಿ ನಿವಾಸಿಯಾದ ಧರ್ಮಗುರು ಫಾ. ಜೆರೋಮ್ ಸಿಕ್ವೆರಾ ಅವರು ಅಫ್ಘಾನಿಸ್ಥಾನದ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದು, ಕ್ಷೇಮವಾಗಿದ್ದಾರೆ. ಹಾಗೆ ಮನೆ ಮಂದಿ ಜತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಸುಮಾರು 4-5 ವರ್ಷಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಬಳಿಕ ಜೆಮ್ಷೆಡ್‌ಪುರದಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ಡಿಸೆಂಬರ್‌ನಲ್ಲಿ ಮತ್ತೆ ಅಫ್ಘಾನಿಸ್ಥಾನಕ್ಕೆ ತೆರಳಿದ್ದರು. ಅಫ್ಘಾನಿಸ್ತಾನದಲ್ಲಿ

ತಾಲಿಬಾನ್ ಉಗ್ರರ ಸಂಘರ್ಷ ಆರಂಭವಾಗುತ್ತಿದ್ದಂತೆ ಊರಿಗೆ ಮರಳಲು ಸಿದ್ಧತೆ ನಡೆಸಿದ್ದರು. ಆದರೆ ಅವರ ಜತೆಗಾರ ಮತ್ತೋರ್ವ ಧರ್ಮಗುರುವಿಗಾಗಿ ಅವರು ವಿಮಾನ ನಿಲ್ದಾಣದಲ್ಲಿ ಉಳಿದಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು