8:22 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

27/07/2023, 21:57

ಮಂಗಳೂರು(reporterkarnataka.com): ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷಕರೊಬ್ಬರಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಕುಳಾಯಿಯ ಪೃಥ್ವಿರಾಜ್ (33) ಶಿಕ್ಷೆಗೊಳಗಾದ ಶಿಕ್ಷಕ. 2014ರ ಆ.1ರಿಂದ 2016ರ ಸೆ.2ರ ನಡುವೆ ಪ್ರೌಢ ಶಾಲೆಯ ವಿದ್ಯಾರ್ಥಿಯನ್ನು ಹಲವು ಬಾರಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒಳಪಡಿಸಿ ದೌರ್ಜನ್ಯ ಎಸಗಿದ್ದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪೃಥ್ವಿರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿದ್ಯಾರ್ಥಿಯನ್ನು ಪೃಥ್ವಿರಾಜ್ ತನ್ನ ಮನೆಗೆ ಕರೆಸಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಇದನ್ನು ಯಾರಿಗಾದರೂ ಹೇಳಿದರೆ ಪರೀಕ್ಷೆಯಲ್ಲಿ ಅಂಕ ಕಡಿತ ಮಾಡುತ್ತೇನೆ, ಹಾಜರಾತಿ ಕಡಿತ ಮಾಡುತ್ತೇನೆ ಎಂದು ಬೆದರಿಸಿದ್ದ. ಬಾಲಕನ ಮರ್ಮಾಂಗದಲ್ಲಿ ಗಾಯವಾದ ಬಳಿಕ ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ವೇಳೆ ಬಾಲಕ ತನ್ನ ಮೇಲಿನ ದೌರ್ಜನ್ಯವನ್ನು ಮನೆಯವರು ಮತ್ತು ವೈದ್ಯರಿಗೆ ತಿಳಿಸಿದ್ದ. ಅಂದಿನ ಸುರತ್ಕಲ್ ಪೊಲೀಸ್ ಇನ್‌ಸ್ಪೆಕ್ಟರ್‌ ಆಗಿದ್ದ ಚೆಲುವರಾಜ್ ಬಿ. ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಅಪರಾಧಿಗೆ ಪೋಕ್ಸ್‌ ಕಾಯ್ದೆ ಸೆಕ್ಷನ್ 6ರಡಿ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ 6 ತಿಂಗಳು ಹೆಚ್ಚುವರಿ ಕಠಿಣ ಸಜೆ, ಪೋಕ್ಸ ಸೆಕ್ಷನ್ 10ರಂತೆ 5 ವರ್ಷ ಸಾದಾ ಸಜೆ, ಐದು ಸಾವಿರ ರೂ ದಂಡ ಮತ್ತು ದಂಡ ಪಾವತಿಸಲು ತಪ್ಪಿದರೆ ಮೂರು ತಿಂಗಳ ಸಾದಾ ಸಜೆ, ಐಪಿಸಿ ಸೆಕ್ಷನ್ 377ರಡಿ 10 ವರ್ಷ ಕಠಿಣ ಸಜೆ, 10 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ ಮೂರು ತಿಂಗಳ ಕಠಿಣ ಸಜೆ, ಐಪಿಸಿ 506ರಡಿ 1 ವರ್ಷ ಸಾದಾ ಸಜೆ, ಒಂದು ಸಾವಿರ ರೂ.ದಂಡ, ಒಂದು ವೇಳೆ ದಂಡ ಪಾವತಿಸದಿದ್ದರೆ ಹೆಚ್ಚುವರಿ ಒಂದು ತಿಂಗಳು ಹೆಚ್ಚುವರಿ ಸಾದಾ ಸಜೆ ವಿಧಿಸಿ ನ್ಯಾಯಾಧೀಶರು ತೀರ್ಪಿತ್ತಿದ್ದಾರೆ.
ಸಂತ್ರಸ್ತ ಬಾಲಕನಿಗೆ ರಾಜ್ಯ ಸರ್ಕಾರ 1 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ವಾದಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು