4:48 PM Monday6 - October 2025
ಬ್ರೇಕಿಂಗ್ ನ್ಯೂಸ್
ಹರ್ಷಿಕಾ ಪೂಣಚ್ಚ – ಭುವನ್ ದಂಪತಿ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬ: ಹರಿದು… Madikeri | ವಿರಾಜಪೇಟೆ: ಹೆಂಡತಿ ಜತೆ ಜಗಳವಾಡಿ ಮನೆಬಿಟ್ಟು ತೆರಳಿದ್ದ ವ್ಯಕ್ತಿ ಶವವಾಗಿ… ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ

ಇತ್ತೀಚಿನ ಸುದ್ದಿ

ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯ ಬಳಸಿ ವೇಶ್ಯಾವಾಟಿಕೆ : ಒಟ್ಟು10 ಆರೋಪಿಗಳ ಸೆರೆ; ಇನ್ನಷ್ಟು ಬಂಧನ ಸಾಧ್ಯತೆ

10/02/2022, 09:41

ಮಂಗಳೂರು(reporterkarnataka.com): ನಗರದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ಪ್ರಥಮ ಪಿಯುಸಿಯ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 10 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. 

ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಈ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಆರಂಭದಲ್ಲಿ ಮೂವರು ಆರೋಪಿಗಳನ್ನು ಐಟಿಪಿ ಹಾಗೂ ಪೋಕ್ಸೊ ಕಾಯ್ದೆಯನ್ವಯ ಬಂಧಿಸಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ 3 ಮಂದಿ ಗ್ರಾಹಕರು ಹಾಗೂ ವ್ಯವಸ್ಥಿತ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದ 4 ಮಂದಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ ಎಂದು ಅವರು ತಿಳಿಸಿದರು.

ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೋರ್ವಳು ಈ ವೇಶ್ಯಾವಾಟಿಕೆ ದಂಧೆಯಲ್ಲಿ ಸಿಲುಕಿಕೊಂಡಿರುವುದು ಆಕೆಯ ಕಾಲೇಜಿನ ಮುಖ್ಯಸ್ಥರಿಗೆ ತಿಳಿದ ಬಳಿಕ ಈ ಪ್ರಕರಣ ಬಹಿರಂಗಗೊಂಡಿತ್ತು. ಆರೋಪಿಗಳು ಈಕೆಗೆ ಬೆದರಿಕೆ, ಆಮಿಷಗಳನ್ನೊಡ್ಡಿ ವೇಶ್ಯಾವಾಟಿಕೆ ದಂಧೆಗೆ

ಬಳಸಿಕೊಂಡಿದ್ದಾರೆ. ಈಕೆಯನ್ನು ಆರೋಪಿಗಳು 2-3 ತಿಂಗಳುಗಳ ಕಾಲ ಸುಮಾರು 6 ಬಾರಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿದ್ದಾರೆಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.

ಈಗಾಗಲೇ ಈಕೆಯ ಮೇಲೆ ಕೃತ್ಯ ಎಸಗಿರುವ ಪ್ರಕರಣದಲ್ಲಿ ಪೊಕ್ಸೊ ಹಾಗೂ ಐಟಿಪಿ ಆ್ಯಕ್ಟ್ ಮೇಲೆ ಪ್ರಕರಣ ದಾಖಲಾಗಿತ್ತು. ಇದೀಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮತ್ತೆ ಹೆಚ್ಚುವರಿ ನಾಲ್ಕು ಪೊಕ್ಸೊ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು