ಇತ್ತೀಚಿನ ಸುದ್ದಿ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾ: ಹೆಬ್ಬಾಳೆ ಸೇತುವೆ ಮುಳುಗಡೆ: ಹೊರನಾಡು ಸಂಪರ್ಕ ಕಡಿತ
23/07/2023, 11:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿ ಹೊರನಾಡು ಸಂಪರ್ಕ ಕಡಿದು ಹೋಗಿದೆ.
ಇದರಿಂದ ಸಂಪರ್ಕ ಕಳೆದುಕೊಂಡ ಹತ್ತಾರು ಹಳ್ಳಿಯ ಜನರು 8-10 ಕಿ.ಮೀ. ಸುತ್ತಿಕೊಂಡು ಪ್ರಯಾಣಿಸಬೇಕಾಯಿತು.
ಕುದುರೆಮುಖ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಅಪಾಯದ ಮಟ್ಟ ಮೀರಿ ಭದ್ರಾ ನದಿ ಹರಿಯುತ್ತಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳ ಒಳಹರಿವಿನಲ್ಲಿ ಹೆಚ್ಚಳವಾಗಿದೆ.
ಭಾರೀ ಗಾಳಿ-ಮಳೆಗೆ ಮಲೆನಾಡಿಗರು ಕಂಗಾಲಾಗಿದ್ದಾರೆ.