8:11 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅಪ್ಪಂದಿರ ದಿನ ದಾರುಣ ಘಟನೆ: ನೇಣಿಗೆ ಶರಣಾದ ಪುತ್ರಿ; ಹೃದಯಾಘಾತದಿಂದ ತಂದೆಯ ಮೃತ್ಯು

20/06/2021, 14:02

ಮಂಡ್ಯ(reporterkarnataka news): ತಂದೆಯ ಜತೆ ಮುನಿಸಿಕೊಂಡು ಮುದ್ದಿನ ಮಗಳು ಆತ್ಮಹತ್ಯೆಗೆ ಶರಣಾದನ್ನು ಕಂಡು ಹೌಹಾರಿದ ತಂದೆ ನೋವು ತಾಳಲಾಗದೆ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಅಪ್ಪಂದಿರ ದಿನವಾದ ಇಂದು ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದ ಬಾಂಧವ್ಯ (17) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದನ್ನು ಕಂಡು ಆಕೆಯ ತಂದೆ ರಾಜು (65) ಅವರು ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.

ಕಾಲೇಜಿಗೆ ಸೇರುವ ವಿಚಾರದಲ್ಲಿ ಮಗಳು ತನ್ನ ತಂದೆ ರಾಜು ಅವರ ಜತೆ ಮುನಿಸಿಕೊಂಡಿದ್ದಳು. 

ಬೆಳಗಿನ ಜಾವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಒಂದು ಕ್ಷುಲ್ಲಕ ವಿಷಯಕ್ಕೆ ಎರಡು ಜೀವ ಬಲಿಯಾಗಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು