9:02 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪ: ಬಂಧಿತ ಯುವಕ ಕೋರ್ಟ್ ಕಟ್ಟಡದ 6 ಮಹಡಿಯಿಂದ ಜಿಗಿದು ಆತ್ಮಹತ್ಯೆ

31/08/2021, 19:56

ಮಂಗಳೂರು(reporterkarnataka.com): ಪೋಸ್ಕೊ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿಯೊಬ್ಬರು ಕೋರ್ಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಕಿನ್ಯಾ ನಿವಾಸಿ ರವಿರಾಜ್‌ (31) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆ ಆರೋಪಿ ರವಿರಾಜ್‌‌‌‌ ಅವರನ್ನು ಬಂಧಿಸಲಾಗಿತ್ತು. ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮನನೊಂದು ಜಿಲ್ಲಾ ನ್ಯಾಯಾಲಯದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಯನ್ನು ಇಂದು ಉಳ್ಳಾಲ ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೊರಗೆ ತಂದು ಕುಳಿತಿರುವಂತೆ ಪೊಲೀಸರು ಸೂಚಿಸಿದ್ದರು. ಆತನ ಪರವಾಗಿ ಹಾಜರಾಗಿದ್ದ ವಕೀಲರು ರವಿರಾಜ್ ಬಳಿ ಮಾತನಾಡಿದ್ದು ಅಲ್ಲಿಯೇ ಇದ್ದರು‌. ಆದರೆ, ಅದೇ ವೇಳೆಗೆ ಹಠಾತ್ತಾಗಿ ಆರೋಪಿ ರವಿರಾಜ್ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಕೋರ್ಟ್ ಒಳಗಡೆಯೇ ಲಿಫ್ಟ್ ಇರುವ ಜಾಗದಲ್ಲಿ ಮೇಲಿನಿಂದ ಕೆಳಕ್ಕೆ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿದ್ದಾನೆ.

ಪ್ರಕರಣದಲ್ಲಿ ರವಿರಾಜ್, ತಾನೇನು ಹಾಗೆ ಮಾಡಿಲ್ಲ. ಪರಿಚಯದ ಹುಡುಗಿ ಎಂದು ಹತ್ತಿರ ಹೋಗಿದ್ದೆ ಎಂದು ವಕೀಲರಲ್ಲಿ ಹೇಳಿದ್ದರು. ಆದರೆ, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಸಾರ್ವಜನಿಕ ಪ್ರದೇಶದಲ್ಲಿ ಸೈಕಲಿನಲ್ಲಿ ಬಂದಿದ್ದ ಅನ್ಯಕೋಮಿನ ಹುಡುಗಿಯನ್ನು ಮುಟ್ಟಲು ಹೋಗಿದ್ದು ಸ್ಥಳೀಯರನ್ನು ಕೆರಳಿಸಿತ್ತು. ಸ್ಥಳೀಯರು ಸೇರಿ, ರವಿರಾಜ್ ಮೇಲೆ ಥಳಿಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರ ಕೈಗೆ ಒಪ್ಪಿಸಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ತಾನು ಮಾಡದ ತಪ್ಪಿಗೆ ಈ ರೀತಿ ಆಯ್ತಲ್ಲಾ ಎಂಬ ನೋವಿನಲ್ಲಿ ರವಿರಾಜ್ ಕೋರ್ಟ್ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು