4:25 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕಿಯ ಬ್ಲಾಕ್ ಮೇಲ್ ಮಾಡಿ ವೇಶ್ಯಾವಾಟಿಕೆಗೆ ಬಳಕೆ: ಸೋ ಕಾಲ್ಡ್ ಸಮಾಜ ಸೇವಕ ಸಿಸಿಬಿ ಪೊಲೀಸರ ಬಲೆಗೆ

22/03/2022, 13:51

ಮಂಗಳೂರು(reporterkarnataka.com): ನಗರದ ನಂದಿಗುಡ್ಡೆ ಸಮೀಪದ ಅಪಾರ್ಟ್ ಮೆಂಟ್ ವೊಂದರಲ್ಲಿ ಪಿಯುಸಿಯ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಬಳಸಿಕೊಂಡು ಮಾಡುತ್ತಿದ್ದ ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಸೇವಕ(?) ಅಬ್ದುಲ್ ರಾಝೀಕ್ ಉಳ್ಳಾಲ್(44)ಎಂಬಾತನನ್ನು ಸಿಸಿಬಿ ಪೊಲೀಸರು ಪೋಕ್ಸೋ ಪ್ರಕರಣದಲ್ಲಿ ಬಂಧಿಸಲಾಗಿದೆ.

ಅಪ್ರಾಪ್ತ ವಯಸ್ಸಿನ ಪಿಯುಸಿ ಹುಡುಗಿಯರಿಗೆ ಸಹಾಯ ಮಾಡುವ ನೆಪದಲ್ಲಿ ಅಪಾರ್ಟ್ ಮೆಂಟಿಗೆ ಕರೆಸಿ, ನಂತರ ಅವರನ್ನು ಬ್ಲಾಕ್ ಮೇಲ್ ಮಾಡಿ ಬಲವಂತವಾಗಿ ಸೆಕ್ಸ್ ಗೆ ಬಳಸಲಾಗುತ್ತಿತ್ತು. ಅಪ್ರಾಪ್ತ ಹುಡುಗಿಯರನ್ನು 65 ವರ್ಷ ದಾಟಿದ ಮುದುಕರಿಗೂ ಒಪ್ಪಿಸಲಾಗುತ್ತಿತ್ತು. ಈ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ 15 ಮಂದಿಯನ್ನು ಬಂಧಿಸಲಾಗಿತ್ತು. ಸಂತ್ರಸ್ತ ಅಪ್ರಾಪ್ತ ವಯಸ್ಸಿನ ಬಾಲಕಿಯರು ನೀಡಿದ ದೂರಿನ ಹಿನ್ನೆಲೆ ಹಾಗೂ ಪಿಂಪ್ ಮಹಿಳೆಯರು ಬಳಸಿದ ಮೊಬೈಲ್ ಫೋನ್ ನಲ್ಲಿದ್ದ ನಂಬರ್ ಗಳ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಈಗಾಗಲೇ 15 ಮಂದಿಯನ್ನು ಬಂಧಿಸಿದ್ದಾರೆ. ಇವರಲ್ಲಿ ಇಬ್ಬರು ಹಿರಿಯ ನಾಗರಿಕರು ಎನ್ನುವುದು ಗಮನಾರ್ಹ ವಿಷಯವಾಗಿದೆ. ಇದೀಗ ಸಮಾಜ ಸೇವಕ, ಮಾಜಿ ಸಚಿವ ಖಾದರ್ ಅವರ ಆಪ್ತ ಎಂದು ಹೇಳಿಕೊಂಡು ತಿರುಗುತ್ತಿದ್ದ ಅಬ್ದುಲ್ ರಾಝೀಕ್ ಎಂಬಾತನ ಬಂಧನವಾಗಿದೆ.

ಬಂಧಿತ ಆರೋಪಿ ಕಾಂಗ್ರೆಸ್ ಮಾತ್ರವಲ್ಲದೆ ಬಿಜೆಪಿ ನಾಯಕರ ಜತೆ, ಪೊಲೀಸ್ ಅಧಿಕಾರಿಗಳ ಜತೆ, ಸರಕಾರಿ ಅಧಿಕಾರಿಗಳ ಜತೆ ಒಡನಾಟ ಇಟ್ಟುಕೊಂಡಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು