7:26 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಸ್ವಾಮೀಜಿ ಬಂಧನ

02/09/2022, 10:11

ಚಿತ್ರದುರ್ಗ(reporterkarnataka.com):ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.

ಗುರುವಾರ ಸಂಜೆಯಿಂದಲೇ ಮಠದಲ್ಲಿ ಸ್ವಾಮೀಜಿಯ ವಿಚಾರಣೆಗಳನ್ನು ನಡೆಸಿದ್ದ ಚಿತ್ರದುರ್ಗ ಗ್ರಾಮೀಣ ಠಾಣೆಯ ಪೊಲೀಸರು, ರಾತ್ರಿ 10ರ ಸುಮಾರಿಗೆ ಮಠದಿಂದ ವಶಕ್ಕೆ ಪಡೆದುಕೊಂಡಿದ್ದರು.

ಫೋಕ್ಸೋ ಪ್ರಕರಣ ದಾಖಲಾಗಿ 6 ದಿನಗಳ ಬಳಿಕ ಪೊಲೀಸರು ಮುರುಘಾ ಶರಣರನ್ನು ವಶಕ್ಕೆ ಪಡೆದಿದ್ದಾರೆ. ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಮಠದಲ್ಲೇ ಮುರುಘಾ ಸ್ವಾಮೀಜಿ ವಿಚಾರಣೆ ನಡೆಸಿದ ಪೊಲೀಸರು ಬಳಿಕ ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ಭಾಗವಾಗಿ ವೈದ್ಯಕೀಯ ಪರೀಕ್ಷೆ ನಡೆಸಲು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದರು ಎನ್ನಲಾಗಿತ್ತು.

ಈ ಬೆಳವಣಿಗೆಯ ಮಧ್ಯೆ ಚಿತ್ರದುರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಮೈಸೂರು ‘ಒಡನಾಡಿ’ ಸಂಸ್ಥೆ ಪ್ರಕರಣವನ್ನು ಹೊರಗೆಳೆದ ಮೇಲೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಆಗಸ್ಟ್ 26ರಂದು ನಗರದ ನಜರಾಬಾದ್​ ಠಾಣೆಯಲ್ಲಿ ದೂರು ದಾಖಲಿಸಿತ್ತು. ನಂತರದ ಬೆಳವಣಿಗೆಯಲ್ಲಿ ಈ ಪ್ರಕರಣವು ಚಿತ್ರದುರ್ಗ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು.

ಬಂಧನದ ಭೀತಿಯಲ್ಲಿದ್ದ ಮುರುಘಾ ಶರಣರು, ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್​, ಶುಕ್ರವಾರಕ್ಕೆ ಮುಂದೂಡಿತ್ತು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇಂದು ಸಂಜೆ ವೇಳೆಗೆ ಎಲ್ಲ ಆರೋಪಿಗಳ ವಿರುದ್ಧ ಲುಕೌಟ್ ನೋಟಿಸ್ ಜಾರಿಯಾಗಿತ್ತು. ಸ್ವಾಮೀಜಿ ವಿರುದ್ಧ ಪೋಕ್ಸೋ ಜೊತೆಗೆ ಪರಿಶಿಷ್ಟ ಜಾತಿ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿಯೂ ಪ್ರಕರಣ ದಾಖಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು