ಇತ್ತೀಚಿನ ಸುದ್ದಿ
ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ಕಿರುಕುಳ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ್ದ ಮಹಿಳೆ ಸಾವು
28/05/2024, 19:26
ಬೆಂಗಳೂರು(reporterkarnataka.com: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ವಯಸ್ಸಿನ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಮಹಿಳೆ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮಹಿಳೆ ಯಡಿಯೂರಪ್ಪ ವಿರುದ್ಧ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿ ದೂರು ನೀಡಿದ್ದರು. ಯಡಿಯೂರಪ್ಪ ವಿರುದ್ಧ ಪೋಕ್ಸಾ ಪ್ರಕರಣ ದಾಖಲಾಗಿ ಎಫ್ ಐಆರ್ ಮಾಡಲಾಗಿತ್ತು.
ಆದರೆ ದೂರು ನೀಡಿದ ಮಹಿಳೆ ಅನಾರೋಗ್ಯದಿಂದ
ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಮಹಿಳೆ ದೂರು ದಾಖಲಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ದೂರು ದಾಖಲಾಗಿತ್ತು. ಇದೇ ಘಟನೆಗೆ ಸಂಬಂಧಿಸಿದ್ದು ಎನ್ನಲಾದ ವೀಡಿಯೊವೊಂದು ವೈರಲ್ ಆಗಿತ್ತು.