ಇತ್ತೀಚಿನ ಸುದ್ದಿ
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಪಾಪಿ ಚಿಕ್ಕಪ್ಪನಿಂದ ಅತ್ಯಾಚಾರ: ಫೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ
11/08/2021, 10:03

ಮೂಡುಬಿದಿರೆ(reporterkarnataka.com): ಅಪ್ರಾಪ್ತ ವಯಸ್ಸಿನ ಸ್ವಂತ ಅಣ್ಣನ ಮಗಳ ಮೇಲೆ ಚಿಕ್ಕಪ್ಪ ಅತ್ಯಾಚಾರ ನಡೆಸಿದ ಭಯಾನಕ ಘಟನೆ ಮೂಡುಬಿದಿರೆ ಠಾಣೆ ವ್ಯಾಪ್ತಿಯ ತೆಂಕಮಿಜಾರು ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ಗೆಳತಿಯರು ಜತೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಗುಡ್ಡ ಪ್ರದೇಶದಲ್ಲಿ ಆಕೆಯ ಚಿಕ್ಕಪ್ಪ ಅಡ್ಡಗಟ್ಟಿ ವಿದ್ಯಾರ್ಥಿನಿಯರನ್ನು ಹೆದರಿಸಿದ್ದಾನೆ.
ಆಗ ಜತೆಗಿದ್ದ ಗೆಳತಿ ಹೆದರಿ ಓಡಿ ಹೋಗಿದ್ದಾಳೆ. ನಂತರ ಪಾಪಿ ಚಿಕ್ಕಪ್ಪ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಮೂಡುಬಿದಿರೆ ಪೊಲೀಸರು ಫೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.