2:52 PM Friday23 - January 2026
ಬ್ರೇಕಿಂಗ್ ನ್ಯೂಸ್
ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ

30/09/2024, 19:41

ಮಂಗಳೂರು(reporterkarnataka.com): ಬೆಳ್ತಂಗಡಿಯ ಮಡಂತ್ಯಾರು ಬಳಿಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ.
ಎರಡನೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಗೌರವಾನ್ವಿತ ಮನು ಕೆ. ಎಸ್. ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.
2023ರ ಜೂನ್‌ 23ರಂದು ಬಾಲಕಿಯನ್ನು ಆರೋಪಿಯು ಹುಟ್ಟು ಹಬ್ಬದ ನೆಪದಲ್ಲಿ ತಮ್ಮ ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಇರುವ ತನ್ನ ಸಹೋದರನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ನಾಗೇಶ್ ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯ ಒಟ್ಟು 12 ಸಾಕ್ಷಿಗಳನ್ನು ವಿಚಾರಣೆ ಮಾಢಿತ್ತು. ಈ ಪ್ರಕರಣದಲ್ಲಿ 24 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು.
ಆರೋಪಿಯ ಪರವಾಗಿ ಆದಾಯ ತೆರಿಗೆಯ ವಿಶೇಷ ಅಭಿಯೋಜಕರೂ ಆಗಿರುವ ಹಿರಿಯ ನ್ಯಾಯವಾದಿ ಹರ್ಷ ಕುಮಾರ್ ಅವರು ವಾದ ಮಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು